ADVERTISEMENT

ವಿಟ್ಲ ಪ.ಪಂಚಾಯಿತಿ ಸಾಮಾನ್ಯ ಸಭೆ | ಕಲುಷಿತ ನೀರಿನಿಂದ ದುರ್ನಾತ: ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 5:59 IST
Last Updated 31 ಆಗಸ್ಟ್ 2025, 5:59 IST
ಸನ್ಮಾನಿಸಲಾಯಿತು
ಸನ್ಮಾನಿಸಲಾಯಿತು   

ವಿಟ್ಲ: ಇಲ್ಲಿನ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆಯಿತು.

ವಿಟ್ಲ ಪಟ್ಟಣದ ಹಲವು ಕಟ್ಟಡಗಳ ಕಲುಷಿತ ನೀರನ್ನು ಇಂಗುಗುಂಡಿಗಳಿಗೆ ಬಿಡದೆ ತೋಡುಗಳಿಗೆ ಬಿಡಲಾಗುತ್ತಿದ್ದು,  ಪರಿಸರವಿಡೀ ದುರ್ನಾತ ಬೀರುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.

ಆಡಳಿತ ಪಕ್ಷದ ಸದಸ್ಯ ಜಯಂತ ಮಾತನಾಡಿ, ಇಂಗುಗುಂಡಿಗಳನ್ನು ಬಳಕೆ ಮಾಡಬೇಕೆಂಬ ನಿಯಮ ಇದ್ದರೂ ಪಾಲನೆ ಮಾಡದೆ ಇರುವುದು ಸರಿಯಲ್ಲ ಎಂದರು.

ADVERTISEMENT

ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಕರುಣಾಕರ ವಿ.ಭರವಸೆ ನೀಡಿದರು.

ವಿಟ್ಲ ದೇವಸ್ಥಾನದ ಪಕ್ಕದ ಸಾರ್ವಜನಿಕ ಶೌಚಾಲಯದಲ್ಲಿ ಅವ್ಯವಸ್ಥೆ ಇದ್ದು, ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರೂ ದುರಸ್ತಿ ಆಗಿಲ್ಲ. ಅದನ್ನು ತಕ್ಷಣ ದುರಸ್ತಿ ಮಾಡುವಂತೆ ಅರುಣ್ ವಿಟ್ಲ ಆಗ್ರಹಿಸಿದರು.

ಕಳೆದ ಸಭೆಗಳಲ್ಲಿ ಕೈಗೊಂಡ ಕೆಲವು ನಿರ್ಣಯಗಳು ಅನುಷ್ಠಾನ ಆಗದ ಬಗ್ಗೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯ ಆರಂಭದಲ್ಲಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಎಂಬ ಘೋಷಣೆಯ ಜಾಗೃತಿ ಕರಪತ್ರ ಮತ್ತು ಬಟ್ಟೆಯ ಕೈಚೀಲ ಬಿಡುಗಡೆ ಮಾಡಲಾಯಿತು.

ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಮುಖ್ಯಾಧಿಕಾರಿ ಕರುಣಾಕರ ವಿ., ಸಮುದಾಯ ಸದಸ್ಯರಾದ ಅರುಣ್ ಎಂ.ವಿಟ್ಲ, ವಿ.ಕೆ.ಎಂ. ಅಶ್ರಫ್, ಹಸೈನಾರ್ ನೆಲ್ಲಿಗುಡ್ಡೆ, ಅಶೋಕ್ ಕುಮಾರ್ ಶೆಟ್ಟಿ, ವಸಂತ, ಗೋಪಿಕೃಷ್ಣ, ರಕ್ಷಿತಾ ಸನತ್, ಡೀಕಯ್ಯ, ಜಯಂತ ಸಿ.ಎಚ್., ವಿಜಯಲಕ್ಷ್ಮೀ, ಸುನೀತಾ, ಲತಾವೇಣಿ, ಪದ್ಮಿನಿ, ಶಾಕೀರಾ, ನಾಮನಿರ್ದೇಶಿತ ಸದಸ್ಯರಾದ, ಶ್ರೀನಿವಾಸ ಶೆಟ್ಟಿ ಕೊಲ್ಯ, ಸುನೀತಾ ಕೋಟ್ಯಾನ್, ತೆರಿಗೆ ವಸೂಲಿಗಾರ ಚಂದ್ರಶೇಖರ ವರ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.