ADVERTISEMENT

ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 7:42 IST
Last Updated 25 ಸೆಪ್ಟೆಂಬರ್ 2025, 7:42 IST
<div class="paragraphs"><p>ಬಂಧನ </p></div>

ಬಂಧನ

   

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ನಾರಾಯಣ (43) ಬಂಧಿತ ಆರೋಪಿ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆಗೆ ಮನೆಗೆ ಬಂದಿದ್ದ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಪೋಷಕರು ವಿಟ್ಲ ಠಾಣೆಗೆ ದೂರು ನೀಡಿದ್ದು, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ (ಪೋಕ್ಸೊ)  ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.