ವಿಟ್ಲ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿಗಳಿಗೆ ಮುಖ್ಯಾಧಿಕಾರಿ ಸೂಚನೆಯಂತೆ ದಾಳಿ ನಡೆಸಿದ ಸಿಬ್ಬಂದಿ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಆಗಿರುವುದರಿಂದ ಮುಖ್ಯಾಧಿಕಾರಿ ಕರುಣಾಕರ ವಿ. ಅವರ ಸೂಚನೆಯಂತೆ ಆರೋಗ್ಯ ವಿಭಾಗದ ಲ್ಯಾನ್ಸಿ ಬ್ರಿಯಾನ್ ನೇತೃತ್ವದ ತಂಡ ವಿಟ್ಲ ವಾರದ ಸಂತೆ ಮತ್ತು ವಿವಿಧ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಉಪಯೋಗಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಸುಮಾರು 5 ಕೆ.ಜಿ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಮುಂದೆಯೂ ಪ್ಲಾಸ್ಟಿಕ್ ಬಳಕೆಗೆ ಸಂಬಂಧಿಸಿ ನಿರಂತರವಾಗಿ ಪರಿಶೀಲನೆ ನಡೆಯಲಿದ್ದು, ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದರೆ ದಂಡ ವಿಧಿಸಲಾಗುವುದು. ವ್ಯಾಪಾರಸ್ಥರು ಪಟ್ಟಣ ಪಂಚಾಯಿತಿಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.