ADVERTISEMENT

ದೇಶದ ಉತ್ತಮ ಭವಿಷ್ಯಕ್ಕಾಗಿ ಮತದಾನ ಮಾಡಿ: ಎಸ್.ವೆಂಕಟಾಚಲಪತಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 12:32 IST
Last Updated 18 ಏಪ್ರಿಲ್ 2024, 12:32 IST
ಮೂಡುಬಿದಿರೆಯ ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ಗುರುವಾರ ಬೆಳಿಗ್ಗೆ ಮೈಟ್ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು
ಮೂಡುಬಿದಿರೆಯ ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ಗುರುವಾರ ಬೆಳಿಗ್ಗೆ ಮೈಟ್ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು   

ಮೂಡುಬಿದಿರೆ: ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಚೇರಿ, ಮೈಟ್ ಎಂಜಿನಿಯರಿಂಗ್ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವನ್ನು ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ವೆಂಕಟಾಚಲಪತಿ, ಪೋಲಿಸ್ ಇನ್‌ಸ್ಪೆಕ್ಟರ್‌ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು ಪ್ರಾಂಶುಪಾಲ ಪ್ರಶಾಂತ್ ಸಿ.ಎಂ. ಉದ್ಘಾಟಿಸಿದರು.

ಎಸ್.ವೆಂಕಟಾಚಲಪತಿ ಮಾತನಾಡಿ, ದೇಶದ ಉತ್ತಮ ಭವಿಷ್ಯಕ್ಕಾಗಿ ಏ.26ರ ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮತದಾನದಿಂದ ಯಾರೂ ದೂರ ಉಳಿಯಬಾರದು ಎಂದರು.

ಜಾಥಾವು ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಆವರಣದಿಂದ ಪುರಸಭೆ ಕಚೇರಿ ಮೂಲಕ ಸಾಗಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸಮಾಪನಗೊಂಡಿತು.

ADVERTISEMENT

ಪಂಚಾಯಿತಿ ಸಿಬ್ಬಂದಿ ರಾಕೇಶ್, ಪ್ರಶಾಂತ್ ಅವರು ಮತದಾನದ ಮಾಹಿತಿ ನೀಡಿದರು. ಸಹಾಯಕ ನಿರ್ದೇಶಕ ಸಾಯಿಶ ಚೌಟ ನಿರೂಪಿಸಿದರು.

ಮೈಟ್ ಕಾಲೇಜು ಉಪನ್ಯಾಸಕ ಶಮಿತ್ ರಾವ್, ಭಾಗವಹಿಸಿದ್ದರು. ಬಳಿಕ ಸಹಿ ಅಭಿಯಾನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.