ADVERTISEMENT

ಮತದಾನ: ಪ್ರಜಾಪ್ರಭುತ್ವದ ಮೌಲ್ಯ ವೃದ್ಧಿ

ಮತದಾರರ ಸಾಕ್ಷರತಾ ಸಂಘದ ವಿಶೇಷ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 6:07 IST
Last Updated 2 ಡಿಸೆಂಬರ್ 2022, 6:07 IST
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾನ ಜಾಗೃತಿ ಕುರಿತ ಕರಪತ್ರ ಬಿಡುಗಡೆ ಮಾಡಿದರು
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾನ ಜಾಗೃತಿ ಕುರಿತ ಕರಪತ್ರ ಬಿಡುಗಡೆ ಮಾಡಿದರು   

ಮಂಗಳೂರು: ‘ಯುವ ಜನರು ದೇಶದ ಬೆಲೆ ಕಟ್ಟಲಾಗದ ಸಂಪತ್ತು. ನೈಸರ್ಗಿಕ ಸಂಪತ್ತಿನಷ್ಟೇ ಮಹತ್ವವಿರುವ ಆ ಸಂಪತ್ತಿನಿಂದ ಮಾತ್ರ ಪ್ರಜಾಪ್ರಭುತ್ವದ ಮೌಲ್ಯ ಯಶಸ್ವಿಯಾಗಿ ಸಾಕಾರಗೊಳಿಸಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಶ್ರಯದಲ್ಲಿ ಸ್ವೀಪ್ ಸಮಿತಿ ವತಿಯಿಂದ ಗುರುವಾರ ನಗರದ ಬಲ್ಮಠ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಸಾಕ್ಷರತಾ ಸಂಘ ಇ.ಎಲ್.ಸಿ.ಯ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕಿರುವ ಯುವ ಮತದಾರರು ತಮ್ಮ ಹೆಸರನ್ನು ನೋಂದಾಯಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮತ್ತು ಮತದಾನದ ಮಹತ್ವದ ಅರಿವಿಗಾಗಿ ಪ್ರತಿ ಕಾಲೇಜಿನಲ್ಲೂ ಮತದಾರರ ಸಾಕ್ಷರತಾ ಸಂಘ ಸ್ಥಾಪಿಸಲಾಗಿದೆ ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ಅವರು ಮತದಾನ ಜಾಗೃತಿ ಕುರಿತ ಕರಪತ್ರ ಬಿಡುಗಡೆ ಮಾಡಿದರು. ಕಾಲೇಜು ಪ್ರಾಂಶುಪಾಲ ಡಾ. ಜಗದೀಶ ಬಾಳ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೇಮ್ಸ್ ಕುಟ್ಹೀನಾ, ಇ.ಎಲ್.ಸಿ. ಕ್ಲಬ್ ಕಾಲೇಜು ಉಸ್ತುವಾರಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕಿ ಹರಿಣಾಕ್ಷಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.