ADVERTISEMENT

ಉಳ್ಳಾಲ | ‘ವಕ್ಫ್‌ ಕಾಯ್ದೆ: ಕರ್ನಾಟಕದ ಮುಖ್ಯಮಂತ್ರಿ ಧೈರ್ಯ ತೋರಿಸಲಿ’

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 14:22 IST
Last Updated 15 ಏಪ್ರಿಲ್ 2025, 14:22 IST

ಉಳ್ಳಾಲ: ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದು, ಈ ಕಾಯ್ದೆಯನ್ನು ತಿರಸ್ಕರಿಸುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಘೋಷಿಸಿದಂತೆ ಸಿದ್ದರಾಮಯ್ಯ ಅವರೂ ಈ ರೀತಿಯ ನಿಲುವು ಘೋಷಿಸಲಿ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾದ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ಆಗ್ರಹಿಸಿದ್ದಾರೆ.

ತೊಕ್ಕೊಟ್ಟಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ಎನ್ನುವುದು ಯಾರಿಂದಲೂ ಕಸಿದಿರುವುವಂಥದ್ದಲ್ಲ. ಇದು ಮುಸ್ಲಿಂ ಪೂರ್ವಜರು ಸಮುದಾಯದ ಅಭಿವೃದ್ಧಿಗಾಗಿ ನೀಡಿದ ಕೊಡುಗೆಯಾಗಿದೆ. ಯಾರಿಂದಲೂ ಕಸಿದ ಆಸ್ತಿ ವಕ್ಫ್ ಆಗುವುದಿಲ್ಲ, ಇದಕ್ಕೆ ಇಸ್ಲಾಮಿನಲ್ಲಿ ಅವಕಾಶವೂ ಇಲ್ಲ. ಇದನ್ನು ದೇಶದ ಪ್ರತಿಯೊಬ್ಬರೂ ವಿರೋಧಿಸಬೇಕು ಎಂದರು.

ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಏ.18ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರ್ ಗಾರ್ಡನ್‌ನಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯಲು ಸಹಕಾರ ನೀಡಬೇಕು ಎಂದರು.

ADVERTISEMENT

ಉಳ್ಳಾಲ ದರ್ಗಾ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ಸಾಹ, ಮಾಜಿ ಸದಸ್ಯ ಫಾರೂಕ್ ಉಳ್ಳಾಲ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.