ADVERTISEMENT

ಮಂಗಳೂರು | ತಲವಾರು ಬೀಸಿದ ಪ್ರಕರಣ: ಇಬ್ಬರು ಪತ್ತೆ

ಪಂಜಿಮೊಗರುವಿನಲ್ಲಿ ದ್ವಿಚಕ್ರವಾಹನದಲ್ಲಿ ತಿರುಗಾಡಿ

​ಪ್ರಜಾವಾಣಿ ವಾರ್ತೆ
Published 7 ಮೇ 2025, 15:54 IST
Last Updated 7 ಮೇ 2025, 15:54 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಮಂಗಳೂರು: ಪಂಜಿಮೊಗರು ಹಾಗೂ ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಕೈಯಲ್ಲಿ ತಲವಾರು ಬೀಸುತ್ತಾ ದ್ವಿಚಕ್ರ ವಾಹನದಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಲು ಯತ್ನಿಸಿದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 

ADVERTISEMENT

‘ಬಿಜೈ ನಿವಾಸಿ ವಿಷ್ಣು (18) ಹಾಗೂ ಆಕಾಶಭವನದ ಕಾಪಿಕಾಡ್ ನಿವಾಸಿ ವೇಣುಗೋಪಾಲ್‌ ಬಹಿರಂಗವಾಗಿ ತಲವಾರು ಬೀಸುತ್ತಾ ತಿರುಗಾಡಿದ ಆರೋಪಿಗಳು. ಆರೋಪಿಗಳ ವರುದ್ಧ ಕಾವೂರು ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109 (ಕೊಲೆ ಯತ್ನ), ಸೆಕ್ಷನ್ 62 (ಅಪರಾಧಕ್ಕೆ ಯತ್ನ)   ಸೆಕ್ಷನ್ 352 (ಶಾಂತಿಭಂಗ), ಸೆಕ್ಷನ್ 351 (2) (ಕ್ರಿಮಿನಲ್ ಬೆದರಿಕೆ) ಮತ್ತಿತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.  

ಈ ಪ್ರಕರಣದ ಆರೋಪಿಗಳಿಬ್ಬರು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಬಾಡಿ ವಾರಂಟ್ ಮೂಲಕ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.