ADVERTISEMENT

57 ವಸತಿ ಗೃಹಗಳ ತ್ಯಾಜ್ಯ ನಿರ್ವಹಣೆ ಹೊಣೆ

ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ನೇತೃತ್ವ

​ಪ್ರಜಾವಾಣಿ ವಾರ್ತೆ
Published 8 ಮೇ 2021, 4:57 IST
Last Updated 8 ಮೇ 2021, 4:57 IST
ಕೋಡಿಯಾಲ್‌ಬೈಲ್ ‘ದೀಪಾ ರೆಸಿಡೆನ್ಸಿ’ಯ ಹಸಿ ತ್ಯಾಜ್ಯ ನಿರ್ವಹಣೆ ಹೊಣೆಯನ್ನು ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆ ವಹಿಸಿಕೊಂಡಿದೆ.
ಕೋಡಿಯಾಲ್‌ಬೈಲ್ ‘ದೀಪಾ ರೆಸಿಡೆನ್ಸಿ’ಯ ಹಸಿ ತ್ಯಾಜ್ಯ ನಿರ್ವಹಣೆ ಹೊಣೆಯನ್ನು ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆ ವಹಿಸಿಕೊಂಡಿದೆ.   

ಮಂಗಳೂರು: ರಾಮಕೃಷ್ಣ ಮಿಷನ್‌ನ ‘ಸ್ವಚ್ಛ ಮಂಗಳೂರು’ ಅಭಿಯಾನದ ಪ್ರೇರಣೆಯಿಂದ ಆರಂಭಗೊಂಡ ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆಯು ಕೋಡಿಯಾಲ್‌ ಬೈಲ್‌ನಲ್ಲಿರುವ ‘ದೀಪಾ ರೆಸಿಡೆನ್ಸಿ’ ಅಪಾರ್ಟ್‌ಮೆಂಟ್‌ನ 57 ವಸತಿ ಗೃಹಗಳಲ್ಲಿ ಹಸಿ ಕಸ ನಿರ್ವಹಣೆಯ ಹೊಣೆ ವಹಿಸಿಕೊಂಡಿದೆ. ಬುಧವಾರ ಇದಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಈಗಾಗಲೇ ನಗರದ ಹಲವಾರು ವಸತಿ ಸಮುಚ್ಚಯಗಳಲ್ಲಿ ಮೂರು ಮಣ್ಣಿನ ಮಡಿಕೆಯ ಮೂಲಕ ಯಾವುದೇ ವಿದ್ಯುತ್ ಅಥವಾ ಇತರೇ ಇಂಧನಗಳನ್ನು ಬಳಸದೆ ಕಡಿಮೆ ಖರ್ಚಿನಲ್ಲಿ ನೈಸರ್ಗಿಕವಾಗಿ ಹಸಿ ಕಸವನ್ನು ನಿರ್ವಹಿಸಲಾಗುತ್ತಿದೆ. ಒಂದೂವರೆ ವರ್ಷಗಳಿಂದ 15 ವಸತಿ ಸಮುಚ್ಚಯಗಳ 500ಕ್ಕೂ ಹೆಚ್ಚಿನ ಫ್ಲಾಟ್‌ಗಳಲ್ಲಿ ಈ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ.

ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಆಡಳಿತ ನಿರ್ದೇಶಕ ದಿಲ್‌ರಾಜ್ ಆಳ್ವ ಮತ್ತು ಅಪಾರ್ಟ್‌ಮೆಂಟ್‌ ಮಾಲೀಕರ ಸಂಘದ ಅಧ್ಯಕ್ಷ ಸಿ.ಎ. ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ, ಖಾಜಾಂಜಿ ಶಾಂತಲಕ್ಷ್ಮಿ ಪ್ರಭು ಇದ್ದರು.

ADVERTISEMENT

ಮಂಗಳಾ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಯೋಜನಾ ಮುಖ್ಯಸ್ಥ ಪುನೀತ್ ಪೂಜಾರಿ ತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.