ADVERTISEMENT

ಪ್ರವೀಣ್ ಹಂತಕರನ್ನು ಕಾನೂನುರೀತ್ಯಾ ಬಗ್ಗುಬಡಿಯುತ್ತೇವೆ: ಸಚಿವ ಸುನೀಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 14:43 IST
Last Updated 28 ಜುಲೈ 2022, 14:43 IST
ಸುನೀಲ್ ಕುಮಾರ್
ಸುನೀಲ್ ಕುಮಾರ್   

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಹಣಕಾಸು ನೆರವು ಕೊಟ್ಟವರೂ ಸೇರಿದಂತೆ ಸಂಚಿನಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಕಾನೂನು ರೀತ್ಯ ಬಗ್ಗು ಬಡಿಯುತ್ತೇವೆ ಎಂದು ದಕ್ಷಿಣ ಕ‌ನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಕುಳಿತು ನಾನು ಸಂಪೂರ್ಣ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದೇನೆ. ಸಮಾಜದಲ್ಲಿ ಗಲಭೆ ಸೃಷ್ಟಿಸುವ ಮನಃಸ್ಥಿತಿ ಹೊಂದಿರುವ ಪಿಎಫ್ ಐ ನಂಥ ಸಂಘಟನೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ ಸೂಚನೆ ನೀಡಿದ್ದೇನೆ' ಎಂದು ಹೇಳಿದರು.

'ರಾಜ್ಯದ ಗಡಿಭಾಗದಲ್ಲಿ ಇನ್ನಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ. ಈ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಪಿಎಫ್ ಐ ಕಾರ್ಯಕರ್ತರ ಪತ್ತೆಗೆ ಸೂಚನೆ ನೀಡಿದ್ದೇವೆ. ನಮ್ಮ ಕಾರ್ಯಕರ್ತರ ಭಾವನೆಯ ಜತೆ ನಾವಿದ್ದೇವೆ ಎಂದು‌ ಭರವಸೆ' ನೀಡಿದರು.

ADVERTISEMENT

'ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸರಕಾರ ಹಾಗೂ ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಕಳೆದುಕೊಳ್ಳಬೇಕಿಲ್ಲ. ಹಿಂದುತ್ವಕ್ಕೆ ಧಕ್ಕೆ ಬಂದಾಗ ನಮ್ಮ ಸರಕಾರ ಎಂದೂ ಕೈ ಕಟ್ಟಿ ಕುಳಿತಿಲ್ಲ. ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದು ಇದೇ ಸರಕಾರ, ಮತಾಂತರ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದೂ ನಮ್ಮದೇ ಸರ್ಕಾರ' ಎಂದು ಹೇಳಿದರು.

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂದು ನೀವು ನೋಡಿದ್ದೀರಿ, ಹುಬ್ಬಳ್ಳಿ ಘಟನೆಯಾದಾಗ 48 ಗಂಟೆಯೊಳಗಾಗಿ ಮೌಲ್ವಿಯನ್ನು ಎಳೆದು ತಂದಿದ್ದೇವೆ. ಸಿಎಎ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಮತಾಂಧ ಶಕ್ತಿಗಳನ್ನು ನಿಯಂತ್ರಣಕ್ಕೆ ತಂದಿದ್ದು ಕೂಡಾ ಇದೇ ಸರ್ಕಾರ ಎಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.