ADVERTISEMENT

ಮಂಗಳೂರು | ವಾಟ್ಸ್‌ಆ್ಯಪ್‌ನಲ್ಲಿ ಕೋಮುದ್ವೇಷ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 4:57 IST
Last Updated 16 ಜುಲೈ 2025, 4:57 IST
ರಾಮಪ್ರಸಾದ್
ರಾಮಪ್ರಸಾದ್   

ಮಂಗಳೂರು: ವಾಟ್ಸ್‌ಆ್ಯಪ್‌ ಮೂಲಕ ಕೋಮು ದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಸುರತ್ಕಲ್ ಠಾಣೆಯ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

ಕುಳಾಯಿ ಕೆ.ಕೆ. ಶೆಟ್ಟಿ ಕಾಂಪೌಂಡ್‌ನ ರಾಮಪ್ರಸಾದ್ (42) ಬಂಧಿತ ಆರೋಪಿ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಬ್ಬ ಆರೋಪಿ ಲೋಕೇಶ್ ಕೋಡಿಕೆರೆ ಎಂಬಾತನನ್ನು ಪಡುಬಿದ್ರಿ ಠಾಣೆ ಪೊಲೀಸರು ಬಂಧಿಸಿದ್ದು, ಈತ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಬಾಡಿ ವಾರೆಂಟ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ADVERTISEMENT

‘ಯಾರೋ ದುಷ್ಕರ್ಮಿಗಳು ನನ್ನ ವಿರುದ್ಧ ಕೋಮು ದ್ವೇಷ ಹರಡಲು ಯತ್ನಿಸಿದ್ದಾರೆ’ ಎಂದು ಕುಳಾಯಿಯ ರಾಜೇಶ್ ಹೊನ್ನಕಟ್ಟೆ ಅವರು, ಜು.13ರಂದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಸುರತ್ಕಲ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಪ್ರಕರಣದ ತನಿಖೆ ಕೈಗೊಂಡು, ಜು.14ರಂದು ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ, ಆರೋಪಿಯು ತಪ್ಪನ್ನು ಒಪ್ಪಿಕೊಂಡ ಮೇರೆಗೆ, ಆತನನ್ನು ಬಂಧಿಸಿ, 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.