ADVERTISEMENT

ಧರ್ಮಸ್ಥಳ ಬಳಿಯ ಬೊಳಿಯಾರ್‌ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಪಾರಾದ ಶಾಲಾ ಮಕ್ಕಳು

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 4:18 IST
Last Updated 28 ಜುಲೈ 2025, 4:18 IST
   

ಬೆಳ್ತಂಗಡಿ (ಧರ್ಮಸ್ಥಳ): ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬಳಿಯಾರ್ ಬಳಿ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲೇ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.

ಬಳಿಕ ಆನೆ ಕಾಡಿನತ್ತ ತೆರಳಿದೆ. ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ಕಾಡಾನೆ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಕೊಂದಿತ್ತು. ಇದರ ಬೆನ್ನಲ್ಲೇ ಮತ್ತೆ ಒಂಟಿ ಸಲಗ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.