ADVERTISEMENT

ಬಸ್‌ಗಳ‌ ಮುಖಾಮುಖಿ ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 15:51 IST
Last Updated 25 ಜೂನ್ 2025, 15:51 IST
ಸುಳ್ಯ ಸಮೀಪದ ಅರಂತೋಡು ಬಳಿ ಅಪಘಾತಕ್ಕೆ ಒಳಗಾದ ಬಸ್‌
ಸುಳ್ಯ ಸಮೀಪದ ಅರಂತೋಡು ಬಳಿ ಅಪಘಾತಕ್ಕೆ ಒಳಗಾದ ಬಸ್‌   

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,  ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡಿದ್ದ ಕುಶಾಲನಗರದ ಭಾರತಿ (50) ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೂ ಗಂಭೀರ ಗಾಯಗಳಾಗಿದ್ದು, 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್‌ ಕಾಲೇಜು ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಹೆದ್ದಾರಿಯ ತಿರುವಿನಲ್ಲಿ ಎರಡು ಬಸ್‌ಗಳ ಚಾಲಕರು ಅತಿವೇಗದಲ್ಲಿ ಚಾಲನೆ ಮಾಡಿದ್ದು ಘಟನೆಗೆ ಕಾರಣ ಎಂದು ಪ್ರಯಾಣಿಕರು ದೂರಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.