ಮೂಡುಬಿದಿರೆ: ಮಹಿಳೆಯರು ಆರೋಗ್ಯವಾಗಿದ್ದರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದರು.
ಮಿಥುನ್ ರೈ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗವು ಬ್ಲಡ್ ಡೋನರ್ಸ್ ಹೆಲ್ಪ್ ಲೈನ್ ಮೂಡುಬಿದಿರೆ ಮತ್ತು ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಿಥುನ್ ರೈ ಅವರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಾರ್ಡ್ ವಿತರಿಸಿದರು.
ಆಳ್ವಾಸ್ ಹೆಲ್ತ್ ಸೆಂಟರ್‌ನ ಪಿಆರ್‌ಒ ರಾಜೇಶ್, ಬ್ಲಡ್ ಬ್ಯಾಂಕ್‌ನ ಲೀಲಾ, ಬ್ಲಡ್ ಡೋನರ್ಸ್ ಮೂಡುಬಿದಿರೆಯ ಮುಖ್ಯಸ್ಥ ಕ್ಲಾರಿಯೋ ಡಿಸೋಜ ಭಾಗವಹಿಸಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿದರು. ಆಳ್ವಾಸ್ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಹನಾ ಅವರು ಮಹಿಳೆಯರ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ಬರ್ನಾಡ್, ಪುರಸಭೆ ಸದಸ್ಯರಾದ ಕೊರಗಪ್ಪ, ಜೊಸ್ಸಿ ಮಿನೇಜಸ್, ಸುರೇಶ್ ಪ್ರಭು, ಪುರಂದರ ದೇವಾಡಿಗ, ಇಕ್ಬಾಲ್ ಕರೀಂ, ಮಹಿಳಾ ಕಾಂಗ್ರೆಸ್‌ನ ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ ಭಾಗವಹಿಸಿದ್ದರು.
ರಾಜೇಶ್ ಕಡಲಕೆರೆ ನಿರೂಪಿಸಿದರು. 380 ಮಂದಿಗೆ ಆರೋಗ್ಯ ಕಾರ್ಡ್ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.