ADVERTISEMENT

ಮೂಡುಬಿದಿರೆ: ಆ.15ರಂದು ಎಕ್ಸಲೆಂಟ್ ಕಾಲೇಜಿಗೆ ಯದುವೀರ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2023, 12:47 IST
Last Updated 12 ಆಗಸ್ಟ್ 2023, 12:47 IST
ಯದುವೀರ
ಯದುವೀರ   

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್‌ ಕಾಲೇಜಿನಲ್ಲಿ ಆ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗವಹಿಸುವರು ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂಡುಬಿದಿರೆಗೆ ಮೊದಲ ಬಾರಿ ಭೇಟಿ ನೀಡುತ್ತಿರುವ ಅವರನ್ನು ಸಾಂಪ್ರದಾಯಿಕ ಗೌರವ, ಮೆರವಣಿಗೆಯ ಮೂಲಕ ಸಂಸ್ಥೆಗೆ ಬರಮಾಡಿಕೊಳ್ಳಲಾಗುವುದು. ಮಧ್ಯಾಹ್ನ 12 ಗಂಟೆಗೆ ಸಂಸ್ಥೆಯ ನೂತನ ‘ರಾಜ ಸಭಾಂಗಣ’ವನ್ನು ಅವರು ಉದ್ಘಾಟಿಸುವರು. ಬಳಿಕ ನಡೆಯುವ ಸಭಾಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ನಡೆಸುವರು ಎಂದರು.

2022-2023ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯು ಅಂತಿಮ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್‍ಯಾಂಕ್‌ ಪಡೆದ, ಜೆಇಇ, ನಿಟ್, ಐಐಟಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಯದುವೀರ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಗುವುದು ಎಂದರು.

ADVERTISEMENT

ಸಂಸ್ಥೆಯ ಆಡಳಿತ ನಿರ್ದೇಶಕ ಪ್ರೊ.ಬಿ.ಪಿ.ಸಂಪತ್‌ಕುಮಾರ್, ಉಪನ್ಯಾಸಕ ವಾದಿರಾಜ ಕಲ್ಲೂರಾಯ, ಮಾಧ್ಯಮ ಸಂಪರ್ಕ ಅಧಿಕಾರಿ ಚೈತ್ರಾ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.