ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಯಕ್ಷಧ್ರುವ - ಯಕ್ಷ ಶಿಕ್ಷಣ ಯೋಜನೆಯಡಿ ಸೇವಾನಿರತರಾಗಿರುವ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ ಮಂಗಳೂರಿನ ಪತ್ತುಮುಡಿ ಸಭಾಂಗಣದಲ್ಲಿ ನಡೆಯಿತು.
ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ರೂಪುರೇಷೆಯ ಬಗ್ಗೆ ಯಕ್ಷಗಾನ ಶಿಕ್ಷಕರಿಗೆ ತಿಳಿದರು.
ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯ ಸಲಹಾ ಸಮಿತಿ ಗೌರವ ಸಲಹೆಗಾರ ಪ್ರೊ. ಎಂ.ಎಲ್. ಸಾಮಗ, ಪ್ರಸಕ್ತ ಕಾಲದಲ್ಲಿ ಯಕ್ಷಗಾನ ಶಿಕ್ಷಣದ ಸಾಧ್ಯತೆ ಬಗ್ಗೆ ಮಾಹಿತಿ ನೀಡಿದರು.
ಯೋಜನೆಯ ಸಲಹಾ ಸಮಿತಿಯ ಗೌರವ ಸಲಹೆಗಾರ ಎಂ.ಪ್ರಭಾಕರ ಜೋಶಿ ಮಾತನಾಡಿ, ಯಕ್ಷಗಾನ ಶಿಕ್ಷಕರ ಸವಾಲು - ಸಾಧ್ಯತೆಗಳ ಬಗ್ಗೆ ತಿಳಿಸಿದರು.
ಯಕ್ಷಧ್ರುವ ದಶಮ ಪಟ್ಲ ಸಂಭ್ರಮದಲ್ಲಿ ಬಿಡುಗಡೆಯಾದ ಯಕ್ಷಧ್ರುವ ಯಕ್ಷಶಿಕ್ಷಣ - ತೆಂಕುತಿಟ್ಟು ಯಕ್ಷಗಾನ ಶಿಕ್ಷಣ ತಂತ್ರಜ್ಞಾನಾಧಾರಿತ ಪಠ್ಯಪುಸ್ತಕವನ್ನು ಯಕ್ಷಗಾನ ಶಿಕ್ಷಕರಿಗೆ ವಿತರಿಸಲಾಯಿತು.
ಸಲಹಾ ಸಮಿತಿಯ ಸದಸ್ಯ ಸರಪಾಡಿ ಅಶೋಕ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಮಂಬೈ ಘಟಕದ ಸಂಚಾಲಕ ಕರ್ನೂರು ಮೋಹನ್ ರೈ, ಯಕ್ಷಗಾನ ಸಂಘಟಕ ರಮೇಶ್ ಮಂಜೇಶ್ವರ, ನಗರ ರಾಘವೇಂದ್ರ ಸೇರಿದಂತೆ 36 ಯಕ್ಷಗಾನ ಶಿಕ್ಷಕರು ಉಪಸ್ಥಿತರಿದ್ದರು.
ಪಣಂಬೂರು ವಾಸುದೇವ ಐತಾಳ ಸ್ವಾಗತಿಸಿ, ವಂದಿಸಿದರು. ಸಂಯೋಜಕ ದೀವಿತ್ ಎಸ್.ಕೆ ಪೆರಾಡಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.