ADVERTISEMENT

ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ್ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 15:48 IST
Last Updated 8 ಜೂನ್ 2025, 15:48 IST
<div class="paragraphs"><p>ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್</p></div>

ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್

   

ಮಂಗಳೂರು: ತೆಂಕು ತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ (70) ಭಾನುವಾರ ನಿಧನರಾದರು.

ಕೊರಗದಾಸ ಅವರ ಬಳಿ ಯಕ್ಷಗಾನ ತರಬೇತಿ ಪಡೆದಿದ್ದ ಅವರು ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದ ಕಟ್ಟೆ, ಸುರತ್ಕಲ್ ಮತ್ತು ಕಟೀಲು ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಐದು ದಶಕಗಳ ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದರು.

ADVERTISEMENT

ಮೂಕಾಸುರ, ವಿಜಯ, ದಾರುಕ, ಪಾಪಣ್ಣ, ಬಾಹುಕ ಮೊದಲಾದ ಪೌರಾಣಿಕ ಪಾತ್ರಗಳ ನಿರ್ವಹಣೆಗೆ ಹೆಸರಾಗಿದ್ದರು. ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಪಾತ್ರ ನಿರ್ವಹಿಸಬಲ್ಲವರಾಗಿದ್ದರು.

'ಯಕ್ಷಗಾನ ಕಲಾರಂಗ ಪ್ರಶಸ್ತಿ'ಗೆ ಭಾಜನರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.