ಸದಾಶಿವ ಶೆಟ್ಟಿ
ಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಕಟೀಲು ಮೇಳದಲ್ಲಿ 20 ವರ್ಷಗಳಿಂದ ವೇಷಧಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು ಕಟೀಲು ಮೂರನೇ ಮೇಳದ ವ್ಯವಸ್ಥಾಪಕರಾಗಿಯೂ ಸೇವೆ ಸಲ್ಲಿಸಿದ್ದರು.
ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ತುಳು - ಕನ್ನಡ ಪ್ರಸಂಗಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದರು. ಸ್ತ್ರೀ ವೇಷ, ಪುಂಡು, ರಾಜವೇಶ, ನಾಟಕೀಯ ವೇಷಗಳೆಲ್ಲವನ್ನು ಸಮರ್ಥವಾಗಿ ನಿರ್ವಹಿಸುವ ಕಲಾವಿದರಾಗಿದ್ದರು.
ನಗರದ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಭಾನುವಾರ ಮಧ್ಯಾಹ್ನ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರ ಮಧ್ಯಾಹ್ನ 1.15 ಕ್ಕೆ ಕದ್ರಿ ಸ್ಮಶಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.