
ಪ್ರಜಾವಾಣಿ ವಾರ್ತೆ
ಶ್ರೀಧರ ರೈ
ಬಂಟ್ವಾಳ: ತಾಲೂಕಿನ ಮುಡಿಪು ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68 ) ಅವರು ಭಾನುವಾರ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾದರು.
ಅವರು ಕೊಲ್ಲೂರು ಮೇಳ, ಸುಂಕದಕಟ್ಟೆ ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಪುಂಡು ವೇಷ, ರಾಜ ವೇಷ, ಬಣ್ಣದ ವೇಷಧಾರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.