
ಮಂಗಳೂರು: ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ ಬೆಳಗಿನ ಜಾವ ನಿಧನರಾದರು.
ಅವರಿಗೆ ಪತ್ನಿ, ಪುತ್ರ ಇದ್ದಾರೆ. ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿ ಎಂಬಲ್ಲಿ ಕೃಷ್ಣ ಭಟ್ಟ - ಹೇಮಾವತಿ ದಂಪತಿ ಪುತ್ರನಾಗಿ 1951 ಅಕ್ಟೋಬರ್ 13 ರಂದು ಜನಿಸಿದ ಶಂಭು ಶರ್ಮ, ಆಕಸ್ಮಿಕ ಸಂದರ್ಭವೊಂದರಲ್ಲಿ ತಾಳಮದ್ದಳೆ ಅರ್ಥ ಹೇಳುವ ಮೂಲಕ ಯಕ್ಷ ಕ್ಷೇತ್ರಕ್ಕೆ ಕಾಲಿಟ್ಟವರು. ನಂತರ ಇದೇ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಸಿದ್ಧ ಅರ್ಥಧಾರಿಯಾಗಿ ಹೆಸರು ಮಾಡಿದರು.
ವೃತ್ತಿಯಲ್ಲಿ ಉಪನ್ಯಾಸ ರಾಗಿ ಪ್ರವೃತ್ತಿ ಯಲ್ಲಿ ಕಲಾವಿದರಾಗಿದ್ದರು. ಸುಬ್ರಹ್ಮಣ್ಯ ಮೇಳ, ಕದ್ರಿ ಮೇಳ ಮೊದಲಾದ ಮೇಳಗಳಲ್ಲಿ ಅತಿಥಿ ಕಲಾವಿದರಾಗಿ ಪಾತ್ರ ನಿರ್ವಹಿಸುತ್ತಿದ್ದರು.
ಅವರಿಗೆ ಯಕ್ಷರಂಗ ಪ್ರಶಸ್ತಿ, ಪೆರ್ಲ ಕೃಷ್ಣ ಭಟ್ಟ ಪ್ರಶಸ್ತಿ, ವಿಟ್ಲ ಜೋಶಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ದೊರೆತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.