ADVERTISEMENT

ದಿನೇಶ ಅಮ್ಮಣ್ಣಾಯ, ರಘುರಾಮ ಹೊಳ್ಳಗೆ ‘ಪದ್ಯಾಣ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 5:36 IST
Last Updated 18 ಅಕ್ಟೋಬರ್ 2022, 5:36 IST
ದಿನೇಶ್‌ ಅಮ್ಮಣ್ಣಯ, ರಘುರಾಮ ಹೊಳ್ಳ
ದಿನೇಶ್‌ ಅಮ್ಮಣ್ಣಯ, ರಘುರಾಮ ಹೊಳ್ಳ   

ಪುತ್ತೂರು: ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ನೀಡುವ ‘ಪದ್ಯಾಣ ಪ್ರಶಸ್ತಿ’ಗೆ ತೆಂಕುತಿಟ್ಟು ಯಕ್ಷಗಾನದ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ಆಯ್ಕೆಗೊಂಡಿದ್ದಾರೆ.

ಅ.23ರಂದು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸುವರು. ಶಾಸಕ ಸಂಜೀವ ಮಠಂದೂರು, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಭಾಗವಹಿಸುವರು. ಪದ್ಯಾಣ ಗಣಪತಿ ಭಟ್ಟರ ಸ್ಮೃತಿ ಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡುವರು. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ. ಹನುಮ ಗಿರಿ ಮೇಳದ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT