ಸತೀಶ್ ಆಚಾರ್ಯ
ಬೆಳ್ತಂಗಡಿ (ದಕ್ಷಿಣ ಕನ್ನಡ): ಅಂಡಿಂಜೆ ಕಿಲಾರ ಮಾರಿಕಾಂಬಾ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ(40) ಮೃತಪಟ್ಟಿದ್ದಾರೆ. ಸೋಮವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ.
ಅಂಡಿಂಜೆ ಗ್ರಾಮದ ಪಿಲಿಯೂರು ಮನೆ ನಿವಾಸಿಯಾಗಿರುವ ಸತೀಶ್ ಆಚಾರ್ಯ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತರಾಗಿದ್ದರು. ಸುಳ್ಯದಲ್ಲಿ ಭಾನುವಾರ ನಡೆದ ಯಕ್ಷಗಾನ ಮುಗಿಸಿ ತಮ್ಮ ಬೈಕ್‌ನಲ್ಲಿ ಅಂಡಿಂಜೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ.
ಅಪಘಾತದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಸತೀಶ್ ಆಚಾರ್ಯರಿಗೆ ತಾಯಿ, ಸಹೋದರಿ, ಸಹೋದರ ಇದ್ದಾರೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.