ADVERTISEMENT

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 6:48 IST
Last Updated 19 ಜುಲೈ 2025, 6:48 IST
<div class="paragraphs"><p>ಪಾತಾಳ ವೆಂಕಟರಮಣ ಭಟ್‌</p></div>

ಪಾತಾಳ ವೆಂಕಟರಮಣ ಭಟ್‌

   

ಮಂಗಳೂರು: ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.

ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಯಕ್ಷಾಭಿಮಾನಿಗಳ ಮನ ಗೆದ್ದವರು ವೆಂಕಟರಮಣ ಭಟ್ಟರು.

ADVERTISEMENT

16 ನವೆಂಬರ್ 1933ರಲ್ಲಿ ಪುತ್ತೂರು ಸಮೀಪದ ಬೈಪದವು ಎಂಬಲ್ಲಿ ಜನಿಸಿದ ಅವರು, ಚಿಕ್ಕಂದಿನಲ್ಲೇ ಯಕ್ಷಗಾನ ಆಸಕ್ತಿ ಬೆಳೆಸಿಕೊಂಡವರು. ಪುತ್ತೂರು ಕೃಷ್ಣ ಭಟ್ಟರಿಂದ ತೆಂಕುತಿಟ್ಟಿನ ಯಕ್ಷಗಾನ ವಿದ್ಯೆ ಕಲಿತು,  ಸೌಕೂರು ಮೇಳ, 1954ರಲ್ಲಿ ಮೂಲ್ಕಿ ಮೇಳ, 1963ರಲ್ಲಿ ಧರ್ಮಸ್ಥಳ ಮೇಳಕ್ಕೆ ಸೇರಿದರು. ಧರ್ಮಸ್ಥಳ ಮೇಳದ ತಿರುಗಾಟವು ಪಾತಾಳ ವೆಂಕಟ್ರಮಣ ಭಟ್ಟರ ಕಲಾ ಜೀವನದ ಸುವರ್ಣ ಯುಗ.

ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ದ್ರೌಪದಿ, ಮೀನಾಕ್ಷಿ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು ವೆಂಕಟರಮಣ ಭಟ್ಟರು.

ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ  ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ ದೊರೆತಿವೆ. ಅನೇಕ ಸಂಘ– ಸಂಸ್ಥೆಗಳು ಅವರನ್ನು ಗೌರವಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.