ಮೂಡುಬಿದಿರೆ: ‘ಯಕ್ಷಗಾನ ರಂಗದಲ್ಲಿ ಶ್ರದ್ಧೆಯಿಂದ ದುಡಿಯುತ್ತಿರುವ ನನಗೆ ಸನ್ಮಾನದಿಂದ ಇನ್ನಷ್ಟು ಹುರುಪು ಬಂದಿದೆ. ಯಕ್ಷಗಾನದ ಶ್ರೀಮಂತ ಪರಂಪರೆ ಮುಂದುವರಿಯಬೇಕು, ಕಲಾವಿದರ ಪಾಲಿಗೆ ಚೇತೋಹಾರಿಯಾಗಬೇಕು’ ಎಂದು ಯಕ್ಷಗಾನ ಕಲಾವಿದ ಸುಬ್ರಾಯ ಹೊಳ್ಳ ಹೇಳಿದರು.
ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪಾವಂಜೆ ಮೇಳದ ಬಯಲಾಟದ ಅಂಗವಾಗಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಷನ್ ಮೂಡುಬಿದಿರೆ ಘಟಕದ ವಾರ್ಷಿಕೋತ್ಸವದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಪಟ್ಲ ಫೌಂಡೇಷನ್ ಕೇಂದ್ರೀಯ ಸಮಿತಿ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ, ಮೂಡುಬಿದಿರೆ ಘಟಕದ ಗೌರವಾಧ್ಯಕ್ಷ ಕೆ. ಶ್ರೀಪತಿ ಭಟ್, ಅಧ್ಯಕ್ಷ ದಿವಾಕರ ಶೆಟ್ಟಿ ಖಂಡಿಗ, ಉಪಾಧ್ಯಕ್ಷ ಸುಬ್ರಹ್ಮಣ್ಯ ಭಟ್, ಕೇಂದ್ರೀಯ ಸಮಿತಿ ಟ್ರಸ್ಟಿ ಪ್ರೇಮನಾಥ ಮಾರ್ಲ, ಪ್ರಮುಖರಾದ ಉದ್ಯಮಿ ತಿಮ್ಮಯ್ಯ ಶೆಟ್ಟಿ, ಜಗದೀಶ ಅಧಿಕಾರಿ, ಸುದರ್ಶನ ಎಂ., ಶಾಂತಾರಾಮ ಕುಡ್ವ ಭಾಗವಹಿಸಿದ್ದರು.
ಕೇಂದ್ರೀಯ ಸಮಿತಿ ಟ್ರಸ್ಟಿಯಾಗಿ ಆಯ್ಕೆಯಾಗಿರುವ ದಿವಾಕರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಸಂಚಾಲಕ ರವಿಪ್ರಸಾದ್ ಕೆ. ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ಸದಾಶಿವ ನೆಲ್ಲಿಮಾರು ವಂದಿಸಿದರು. ಕಾರ್ಯಕ್ರಮದ ಬಳಿಕ ಪಾವಂಜೆ ಮೇಳದವರು `ಸಹಸ್ರ ಕವಚ ಮೋಕ್ಷ 'ಯಕ್ಷಗಾನ ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.