ADVERTISEMENT

‘ಪಟ್ಲ ಪ್ರಶಸ್ತಿ’ಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 12:15 IST
Last Updated 24 ಮೇ 2022, 12:15 IST
ಮಾಂಬಾಡಿ ಸುಬ್ರಹ್ಮಣ್ಯ ಭಟ್‌
ಮಾಂಬಾಡಿ ಸುಬ್ರಹ್ಮಣ್ಯ ಭಟ್‌   

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್‌ ಟ್ರಸ್ಟ್‌ನ 2022ನೇ ಸಾಲಿನ ‘ಪಟ್ಲ ಪ್ರಶಸ್ತಿ’ಗೆ ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್‌ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ಗೌರವಧನ ಒಳಗೊಂಡಿದೆ ಎಂದು ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಸತೀಶ್‌ ಶೆಟ್ಟಿ ಪಟ್ಲ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೇ 29ರಂದು ಮಂಗಳೂರಿನ ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆಯುವ ‘ಯಕ್ಷಧ್ರುವ ಪಟ್ಲ ಸಂಭ್ರಮ–2022’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ವೇಳೆ ಯಕ್ಷಗಾನ ಕ್ಷೇತ್ರದ 10 ಸಾಧಕರಿಗೆ ‘ಯಕ್ಷಧ್ರುವ ಕಲಾ ಗೌರವ’ವನ್ನು ₹20 ಸಾವಿರ ನಗದಿನೊಂದಿಗೆ ಪ್ರದಾನ ಮಾಡಲಾಗುತ್ತದೆ. ಪದ್ಮನಾಭ ಉಪಾಧ್ಯ, ಸದಾಶಿವ ಶೆಟ್ಟಿಗಾರ್‌ ಸಿದ್ದಕಟ್ಟೆ, ಆಜ್ರಿ ಗೋಪಾಲ ಗಾಣಿಗ, ಯೋಗಾಕ್ಷಿ ಗಣೇಶ್‌ ಗುಜರನ್‌, ಮಾಧವ ಭಂಡಾರಿ ಕುಳಾಯಿ, ಕಲ್ಲುಗುಂಡಿ ಕೊರಗಪ್ಪ ಮಣಿಯಾಣಿ, ಉಜಿರೆ ನಾರಾಯಣ ಪೂಜಾರಿ, ವಿಜಯಕುಮಾರ್‌ ಶೆಟ್ಟಿ ಮೈಲೊಟ್ಟು, ಅರೆಹೊಳೆ ಸಂಜೀವ ಶೆಟ್ಟಿ, ಮಧುಕುಮಾರ್‌ ಬೋಳೂರು ಈ ಗೌರವಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಯಕ್ಷಗಾನ ಕ್ಷೇತ್ರದಲ್ಲಿ ವೃತ್ತಿಪರ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಅಶಕ್ತ ಕಲಾವಿದರ ಬದುಕಿನಲ್ಲಿ ಭರವಸೆಯ ಬೆಳಕನ್ನು ಮೂಡಿಸುವ ನಿಟ್ಟಿನಲ್ಲಿ 6 ವರ್ಷಗಳ ಹಿಂದೆ ಆರಂಭವಾದ ಟ್ರಸ್ಟ್‌ ಮೂಲಕ ಈ ತನಕ ₹7.5 ಕೋಟಿಗೂ ಅಧಿಕ ಮೊತ್ತದ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.