
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷಾಂಗಣ ಮಂಗಳೂರು, ಕರ್ನಾಟಕ ಯಕ್ಷಭಾರತಿ ಪುತ್ತೂರು ಇವುಗಳ ಆಶ್ರಯದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹವು ನ.23ರಿಂದ 29ರವರೆಗೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
23ರ ಮಧ್ಯಾಹ್ನ 2 ಗಂಟೆಗೆ ‘ಅಮ್ಮಣ್ನಾಯೆರ್ನ ನೆಂಪು ಬೊಕ್ಕ ತುಳು ತಾಳಮದ್ದೊಲಿ’ ನಡೆಯಲಿದೆ. ಸಂಜೆ 4.30ಕ್ಕೆ ಸಪ್ತಾಹದ ಉದ್ಘಾಟನೆ ನಡೆಯಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಉದ್ಘಾಟಿಸುವರು. ಎಸ್.ಎಲ್.ಡೈಮಂಡ್ ಹೌಸ್‌ನ ರವೀಂದ್ರ ಶೇಟ್ ಅವರಿಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ನೀಡಲಾಗುತ್ತದೆ. ಉದ್ಯಮಿ ಕೃಷ್ಣ ಜೆ. ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
23ರ ಸಂಜೆ 5.30ಕ್ಕೆ ನಚಿಕೇತ, 24ರ ಸಂಜೆ 4 ಗಂಟೆಯಿಂದ ಶಾರದಾ ವಿಲಾಸ, 25ರ ಸಂಜೆ 4ಕ್ಕೆ ಸೌಗಂಧಿಕಾ ಹರಣ, 26ರ ಸಂಜೆ ಶಲ್ಯ ಪರ್ವ, 27ರ ಸಂಜೆ ವರುಣಾದ್ವರ, 28ರ ಸಂಜೆ ಪಾಂಚಜನ್ಯೋತ್ಪತ್ತಿ, 29ರ ಸಂಜೆ 6ರಿಂದ ಸತೀ ಶಕ್ತಿ ಪ್ರಸಂಗದ ತಾಳಮದ್ದಳೆ ನಡೆಯಲಿದೆ. 29 ಸಂಜೆ 4ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ತೋನ್ಸೆ ಪುಷ್ಕಳ ಕುಮಾರ್, ರವೀಂದ್ರ ರೈ ಕಲ್ಲಿಮಾರು, ಲಕ್ಷ್ಮಿನಾರಾಯಣ ರೈ ಹರೇಕಳ, ನಿವೇದಿತಾ ಎನ್. ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.