ADVERTISEMENT

ಯಕ್ಷಾಂಗಣ ಪ್ರಶಸ್ತಿಗೆ ಸ್ವರ್ಣೋದ್ಯಮಿ ಎಂ.ರವೀಂದ್ರ ಶೇಟ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 5:53 IST
Last Updated 8 ನವೆಂಬರ್ 2025, 5:53 IST
ರವೀಂದ್ರ ಶೇಟ್
ರವೀಂದ್ರ ಶೇಟ್   

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರಕ್ಕೆ ಸ್ವರ್ಣೋದ್ಯಮಿ ಎಂ.ರವೀಂದ್ರ ಶೇಟ್ ಆಯ್ಕೆಯಾಗಿದ್ದಾರೆ.

ಹಿರಿಯ ಕಲಾವಿದರಿಗೆ ನೀಡುವ ಯಕ್ಷಾಂಗಣ ಗೌರವ ಪ್ರಶಸ್ತಿಯನ್ನು ಹಿರಿ ತಲೆಮಾರಿನ ವೇಷಧಾರಿ ಬೋಳಾರ ಸುಬ್ಬಯ್ಯ ಶೆಟ್ಟಿ ಅವರಿಗೆ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ನ.23ರಿಂದ 29ರವರೆಗೆ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ -2025’ರ 13ನೇ ವರ್ಷದ ನುಡ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.

ಸುಬ್ಬಯ್ಯ ಶೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT