ADVERTISEMENT

ಕುಕ್ಕೆಗೆ ಶಾಸಕ ಯತ್ನಾಳ್ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 4:03 IST
Last Updated 30 ಸೆಪ್ಟೆಂಬರ್ 2020, 4:03 IST
ಶಾಸಕ ಬಸನಗೌಡ ಪಾಟೀಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.
ಶಾಸಕ ಬಸನಗೌಡ ಪಾಟೀಲ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.   

ಸುಬ್ರಹ್ಮಣ್ಯ: ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ರಾಜೇಶ್ ಅಸ್ರಣ್ಣ, ಶಿಷ್ಟಾಚಾರ ಅಧಿಕಾರಿ ಗೋಪಿನಾಥ್ ನಂಬೀಶ, ಎಂಜಿನಿಯರ್ ಉದಯಕುಮಾರ್ ಹಾಜರಿದ್ದರು. ಕಳೆದ ವಾರ ಶಾಸಕ ಅರವಿಂದ ಲಿಂಬಾವಳಿ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವೇಳೆ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT