ADVERTISEMENT

ಉಳ್ಳಾಲ: ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ SSI ಮಂತ್ರಾ 3.0 ಪ್ರಾರಂಭ

ರೊಬೊಟಿಕ್ಸ್ ಶಸ್ತ್ರಚಿಕಿತ್ಸೆಗೆ ಹೊಸ ಬಲ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 4:18 IST
Last Updated 29 ಆಗಸ್ಟ್ 2025, 4:18 IST
ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು
ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು   

ಉಳ್ಳಾಲ: ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ‘ಎಸ್‌ಎಸ್‌ಐ ಮಂತ್ರಾ 3.0 ರೊಬೊಟಿಕ್‌ ಸರ್ಜಿಕಲ್ ಸಿಸ್ಟಮ್’ ಪರಿಚಯಿಸಿದೆ.

ಭಾರತದಲ್ಲೇ ತಯಾರಿಸಲಾದ ಈ ತಂತ್ರಜ್ಞಾನವು, ಗಂಭೀರ ಶಸ್ತ್ರಚಿಕಿತ್ಸೆಗಳಲ್ಲಿ ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿದೆ ಎಂದು ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ವಿಜಯಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2016ರಲ್ಲಿ ಯೆನೆಪೋಯ ಆಸ್ಪತ್ರೆಯು ‘ಡಾ ವಿನ್ಸಿ ರೊಬೊಟಿಕ್‌ ಸಿಸ್ಟಮ್‌’ ಅಳವಡಿಸಿ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿ ಮೂಡಿಸಿತ್ತು. ಅಂದಿನಿಂದ ಇಂದಿನವರೆಗೆ ಸುಮಾರು ಒಂದು ಸಾವಿರ ಟೊಬೊಟಿಕ್‌ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ನೆರವೇರಿವೆ. ಈಗ ಹೊಸ ಮಂತ್ರಾ 3.0 ಬಳಸಿ ಮೂತ್ರವಿಜ್ಞಾನ, ಆಂಕಾಲಜಿ, ಸ್ತ್ರೀರೋಗ ಮತ್ತು ಸಾಮಾನ್ಯ ಶಸ್ತ್ರಚಿಕಿತ್ಸೆಗಳಲ್ಲಿ ನೂರಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳು ಪೂರ್ಣಗೊಂಡಿವೆ. ಸಣ್ಣ ಗಾಯ, ಕಡಿಮೆ ನೋವು, ಶೀಘ್ರ ಚೇತರಿಕೆ, ಕಡಿಮೆ ರಕ್ತಸ್ರಾವ, ಜಟಿಲ ಶಸ್ತ್ರಚಿಕಿತ್ಸೆಗಳನ್ನು ನಿಖರವಾಗಿ ಹಾಗೂ ಸುರಕ್ಷಿತವಾಗಿ ಮಾಡುವ ಸಾಮರ್ಥ್ಯ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಲಾಭಗಳಾಗಿವೆ ಎಂದರು.

ADVERTISEMENT

ಯೆನೆಪೋಯ ಆಸ್ಪತ್ರೆಯು ತರಬೇತಿ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತಿದೆ. ವಿಶ್ವವಿದ್ಯಾಲಯದ ಕುಲಾಧಿಪತಿ ಯೆನೆಪೋಯ ಅಬ್ದುಲ್ಲಾ ಕುಞಿ, ಸಹ ಕುಲಾಧಿಪತಿ ಫರ್ಹಾದ್ ಯೆನೆಪೋಯ, ಕುಲಪತಿ ಡಾ.ವಿಜಯಕುಮಾರ್ ಅವರ ನೇತೃತ್ವದಲ್ಲಿ ಬಡವರಿಗೆ – ಜಾಗತಿಕ ಮಟ್ಟದ ಚಿಕಿತ್ಸೆಯನ್ನು ತಲುಪಿಸುವುದಕ್ಕೆ ಬದ್ಧವಾಗಿದೆ ಎಂದರು.

ವೈದ್ಯಕೀಯ ಅಧೀಕ್ಷಕ ಡಾ.ಹಬೀಬ್ ರಹಮಾನ್ ಎ.ಎ., ಯುರಾಲಜಿ ವಿಭಾಗದ ಮುಖ್ಯಸ್ಥ ಡಾ.ಮುಜೀಬ್ ರೆಹಮಾನ್, ಶಸ್ತ್ರಚಿಕಿತ್ಸಾ ಆಂಕಾಲಜಿ ಮುಖ್ಯಸ್ಥ ಡಾ.ಜಲಾಲುದ್ದೀನ್ ಅಕ್ಬರ್ ಸಮಗ್ರ ಮಾಹಿತಿ ನೀಡಿದರು. ಎಸ್‌ಎಸ್‌ ಇನೊವೇಷನ್ಸ್‌ ಇಂಟರ್ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಡಾ.ಸುಧೀರ್ ಶ್ರೀವಾಸ್ತವ ಶಸ್ತ್ರಚಿಕಿತ್ಸಾ ತಂಡವನ್ನು ಮುನ್ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.