ADVERTISEMENT

ಬೆಳ್ತಂಗಡಿ| ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಷಿಪ್; ದಿಶಾರಾಘ ಶೆಟ್ಟಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 13:00 IST
Last Updated 4 ಜೂನ್ 2023, 13:00 IST
ದಿಶಾರಾಘ ಶೆಟ್ಟಿ
ದಿಶಾರಾಘ ಶೆಟ್ಟಿ   

ಬೆಳ್ತಂಗಡಿ: ಬೆಂಗಳೂರು ಅಂತರಾಷ್ಟ್ರೀಯ ಯೋಗ ಉತ್ಸವ- 2023ರ ಯೋಗಾಸನ ಸ್ಪರ್ಧೆಯಲ್ಲಿ ಧರ್ಮಸ್ಥಳದ ದಿಶಾರಾಘ ಶೆಟ್ಟಿ ಮೂರನೇ ಸ್ಥಾನ ಪಡೆದು ಕಾಂಬೋಡಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಇನ್‌ಸ್ಟಿಟ್ಯೂಟ್‌ ಹಾಗೂ ಆಚಾರ್ಯ ಯೋಗ ಯೂತ್ ಕ್ಲಬ್ ಮತ್ತು ಜಮುನ ರವಿ ಫೌಂಡೇಷನ್ ಸಹಯೋಗದಲ್ಲಿ ಈಚೆಗೆ ಸ್ಪರ್ಧೆ ನಡೆದಿತ್ತು. ಅವರು ಮನಶಾಸ್ತ್ರಜ್ಞೆಯಾಗಿದ್ದು, ಮಂಗಳೂರಿನ ದೇಲಂಪಾಡಿ ಯೋಗ ಪ್ರತಿಷ್ಠಾನದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ದಿಶಾರಾಘ ಅವರು ಮಾಣಿಯ ವಿನೀತ್ ಶೆಟ್ಟಿ ಅವರ ಪತ್ನಿಯಾಗಿದ್ದು, ಧರ್ಮಸ್ಥಳದ ದಿನೇಶ್ ಶೆಟ್ಟಿ, ಸಾರಿಕಾ ಶೆಟ್ಟಿ ಪುತ್ರಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT