ADVERTISEMENT

ವೈಬ್ರಂಟ್ ಕಾಲೇಜಿನಲ್ಲಿ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 14:25 IST
Last Updated 21 ಜೂನ್ 2025, 14:25 IST
ಮೂಡುಬಿದಿರೆಯ ವೈಬ್ರಂಟ್ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು 
ಮೂಡುಬಿದಿರೆಯ ವೈಬ್ರಂಟ್ ಕಾಲೇಜಿನಲ್ಲಿ ಶನಿವಾರ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು    

ಮೂಡಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಬೆಳಿಗ್ಗೆ ಆರು ಗಂಟೆಯಿಂದ ಸುಮಾರು ಒಂದು ಗಂಟೆಗಳ ಕಾಲ ಆಯುಷ್ ಮಂತ್ರಾಲಯ ಸೂಚಿಸಿದ ಸಾಮಾನ್ಯ ಯೋಗಾಭ್ಯಾಸ ಕ್ರಮವನ್ನು ವಿದ್ಯಾರ್ಥಿಗಳು ಅನುಸರಿಸಿದರು. ವೃಂದಾ ಬೆಡೇಕರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಹತ್ವವನ್ನು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮೆಹಮ್ಮದ್ ಭಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೇಕರ್, ಸುಭಾಶ್ ಝಾ, ಡಾ.ಎಸ್.ಎನ್ ವೆಂಕಟೇಶ್ ನಾಯಕ್, ಶರತ್ ಗೋರೆ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.