ADVERTISEMENT

ನದಿಗಿಳಿದ ಯುವಕ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 2:42 IST
Last Updated 22 ಆಗಸ್ಟ್ 2022, 2:42 IST

ಸುಬ್ರಹ್ಮಣ್ಯ: ಇಲ್ಲಿ ಭಾನುವಾರ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಮಂಡ್ಯದ ಶಿವು (25) ನಾಪತ್ತೆಯಾಗಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅವರು, ಸ್ನೇಹಿತರೊಂದಿಗೆ ಬಂದಿದ್ದರು. ‘ಅವರಿಗೆ ಈಜು ಬರುತ್ತದೆ’ ಎಂದು ಸ್ನೇಹಿತರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಪತ್ತೆ ಕಾರ್ಯಚರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT