ADVERTISEMENT

ಪೈಲಟ್‌ ತರಬೇತಿ ಪಡೆದಿದ್ದ ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 17:59 IST
Last Updated 1 ಜುಲೈ 2020, 17:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮಂಗಳೂರು: ವಿಮಾನ ಪೈಲಟ್‌ ತರಬೇತಿ ಪಡೆದಿದ್ದ ಯುವಕರೊಬ್ಬರು ಇಲ್ಲಿನ ಕಂಕನಾಡಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮರೋಳಿಯಲ್ಲಿ ಬುಧವಾರ ಸಂಜೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರೋಳಿ ನಿವಾಸಿ ಅದ್ವೈತ್‌ ಶೆಟ್ಟಿ (32) ಮೃತ ಯುವಕ. ಇವರು ವಿಮಾನ ಪೈಲಟ್‌ ತರಬೇತಿ ಪಡೆದಿದ್ದು, ಉದ್ಯೋಗಕ್ಕಾಗಿ ಹುಡುಕುತ್ತಿದ್ದರು. ಮೂರು ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದರು. ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT