ಬಂಟ್ವಾಳ: ನಿರ್ದಿಷ್ಟ ಗುರಿಯೊಂದಿಗೆ ಯುವವಾಹಿನಿ ಘಟಕವು ಸಂಘಟಿತವಾಗಿ ಸಾಧನಾ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಯುವವಾಹಿನಿ ಘಟಕದ ರಜತ ವರ್ಷ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು.
ಇಲ್ಲಿನ ಬಿ.ಸಿ.ರೋಡು ಗಾಣದ ಪಡ್ಪು ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯುವವಾಹಿನಿ ಘಟಕದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವವಾಹಿನಿ ಘಟಕದ ನಿರ್ಗಮನ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ, ಪ್ರಥಮ ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.