ADVERTISEMENT

ಆರೋಪಿಗಳು ಸೆರೆಯಾಗಿದ್ದು ದಾವಣಗೆರೆಯಲ್ಲಿ

​ಪ್ರಜಾವಾಣಿ ವಾರ್ತೆ
Published 30 ಮೇ 2018, 8:52 IST
Last Updated 30 ಮೇ 2018, 8:52 IST

ದಾವಣಗೆರೆ: ಸಾಹಿತಿ ಕೆ.ಎಸ್‌. ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 21ರಂದು ಇಲ್ಲಿನ ಹಳೆ ಬಸ್‌ ನಿಲ್ದಾಣದ ಬಳಿ ಎಸ್‌ಐಟಿ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪತ್ರಕರ್ತೆ ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸುವಾಗ ಎಸ್‌ಐಟಿ ಅಧಿಕಾರಿಗಳಿಗೆ ಭಗವಾನ್‌ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಗಳ ಜಾಡು ಸಿಕ್ಕಿದೆ. ಪ್ರಕರಣದ ಬೆನ್ನು ಹತ್ತಿದ ಅಧಿಕಾರಿಗಳು ಆರೋಪಿಗಳನ್ನು ಹಿಡಿದಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಶಿಕಾರಿಪುರ ತಾಲ್ಲೂಕು ಕಪ್ಪನ ಹಳ್ಳಿಯ ಸುಜಿತ್‌ ಕುಮಾರ್‌ ಸನಾತನ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ. ಶಿವಮೊಗ್ಗ ಹಾಗೂ ದಾವಣಗೆರೆಯಲ್ಲಿ ಸಂಸ್ಥೆಯ ಸಂಘಟನೆಗಾಗಿ ದುಡಿಯುತ್ತಿದ್ದ. ಹರಿಹರ ತಾಲ್ಲೂಕು ಗುಳ್ಳದಹಳ್ಳಿ ಸಮೀಪದ ನೆಹರೂ ನಗರ ಕ್ಯಾಂಪ್‌ ಈತನ ತಾಯಿಯ ತವರು ಮನೆ.

ADVERTISEMENT

ಸುಜಿತ್‌ನ ಅಜ್ಜಿ ಮನೆಯಲ್ಲೂ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪಿಸ್ತೂಲ್‌ ಮತ್ತು ಸಜೀವ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.