ADVERTISEMENT

ಆರ್ಥಿಕ ಸ್ವಾವಲಂಬನೆಗೆ ಸಣ್ಣ ಕೈಗಾರಿಕೆ ಅವಶ್ಯ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 8:00 IST
Last Updated 6 ಜನವರಿ 2012, 8:00 IST

ಚನ್ನಗಿರಿ: ಗರಗ ಗ್ರಾಮದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ತೆಂಗಿನ ನಾರಿನ ಉತ್ಪನ್ನಗಳ ಉತ್ಪಾದನಾ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಈಗ ್ಙ 31.35 ಲಕ್ಷ ವೆಚ್ಚದಲ್ಲಿ ಸ್ವಯಂಚಾಲಿತ ಯಂತ್ರಗಳನ್ನು ಆಳವಡಿಸಿ ಹೆಚ್ಚು ಪ್ರಮಾಣದಲ್ಲಿ ಉತ್ಪಾದನೆ ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ತಾಲ್ಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತೆಂಗಿನ ನಾರಿನ ಅಭಿವೃದ್ಧಿ ನಿಗಮದ ವತಿಯಿಂದ ತೆಂಗಿನ ನಾರಿನ ಉತ್ಪನ್ನಗಳ ಉತ್ಪಾದನಾ ಕೇಂದ್ರಕ್ಕೆ ಸ್ವಯಂಚಾಲಿತ ಯಂತ್ರ ಆಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ತೆಂಗನ್ನು ಈ ತಾಲ್ಲೂಕಿನಲ್ಲಿ ಬೆಳೆಯಲಾಗುತ್ತಿದೆ. ಶೇ. 25ರಷ್ಟು ಮಾತ್ರ ತೆಂಗಿನ ಸಿಪ್ಪೆಯನ್ನು ನಾರಿನ ಹುರಿ ಮಾಡುವ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಉಳಿದ ಸಿಪ್ಪೆ. ಮಟ್ಟೆ ಮುಂತಾದವುಗಳು ತಿಪ್ಪೆ ಹಾಗೂ ಉರುವಲಿಗಾಗಿ ಬಳಕೆಯಾಗುತ್ತಿದೆ. ಆದ್ದರಿಂದ ಸುಲಭವಾಗಿ ಸಿಗುವ ತೆಂಗಿನ ಉತ್ಪನ್ನಗಳಿಂದ ಮ್ಯಾಟ್, ಹಾಸಿಗೆ ಮುಂತಾದವುಗಳನ್ನು ತಯಾರಿಸಿ ಮಾರಾಟ ಮಾಡಿ ಆರ್ಥಿಕವಾಗಿ ಸಬಲರಾಗಬಹುದು. ಈ ನಿಗಮಕ್ಕೆ ಹೆಚ್ಚಿನ ಅನುದಾನವನ್ನು ಸರ್ಕಾರ ಮೀಸಲಿಟ್ಟಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು.

ತೆಂಗಿನ ನಾರಿನ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜೆ.ಎಸ್. ರೇಖಾ ಹುಲಿಯಪ್ಪಗೌಡ ಮಾತನಾಡಿ, ಈ ನಿಗಮ 1985ರಲ್ಲಿ ಪ್ರಾರಂಭಗೊಂಡಿದ್ದು, ಸರ್ಕಾರದ ಪ್ರೋತ್ಸಾಹದ ಕೊರತೆಯಿಂದ ನಷ್ಟದಲ್ಲಿತ್ತು. ಕಳೆದ ಎರಡು ವರ್ಷಗಳಿಂದ ಅಮೂಲಾಗ್ರ ಬದಲಾವಣೆಗಳನ್ನು ಮಾಡಿದ್ದರಿಂದ ಈಗ ಒಂದಿಷ್ಟು ಲಾಭವನ್ನು ಗಳಿಸುತ್ತಿದೆ.

ಪ್ರತಿವರ್ಷ ರೂ. 5 ಕೋಟಿ ವ್ಯವಹಾರವನ್ನು ನಿಗಮ ಮಾಡುತ್ತಿದ್ದು, ಪಕ್ಕದ ಕೇರಳ ರಾಜ್ಯದಲ್ಲಿ ಈ ನಿಗಮ ್ಙ 400 ಕೋಟಿ ವಹಿವಾಟನ್ನು ನಡೆಸುತ್ತಿದೆ ಎಂದು ಹೇಳಿದರು.

ಜಿ.ಪಂ. ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಜಿ.ಪಂ. ಸದಸ್ಯರಾದ ಕೆ.ಜಿ. ಬಸವಲಿಂಗಪ್ಪ, ಎಚ್.ವಿ. ರುದ್ರಪ್ಪ, ತಾ.ಪಂ. ಅಧ್ಯಕ್ಷೆ ಈ. ಸುಧಾ ಕುಮಾರಸ್ವಾಮಿ, ಸದಸ್ಯ ಎ.ಬಿ. ಶಿವಕುಮಾರ್, ಗ್ರಾ.ಪಂ. ಅಧ್ಯಕ್ಷೆ ಕುಸುಮಾ ರಾಜಪ್ಪ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಅಪರ ನಿರ್ದೇಶಕ ಜೆ. ರಂಗರಾಮ್, ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಹಾಲಸ್ವಾಮಿ, ಹಿರೇಮಳಲಿ ಲೋಕೇಶಪ್ಪ, ಗಿರಿಜಮ್ಮ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.