ದಾವಣಗೆರೆ: ಜಿಲ್ಲೆಗೆ 2012-13ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ನೆರವು ದೊರೆತಿಲ್ಲ ಎನ್ನುವ ಭಾವನೆ ಬೇಡ. ಹಿಂದೆ ನೀಡಿರುವ ಅನುದಾನವೇ ಸಾಕಷ್ಟು ಇದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.
ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು.ಸರ್ಕಾರದ ಸಾಧನೆಯನ್ನು ಹಲವರು ಕಾಮಾಲೆ ಕಣ್ಣಿನಿಂದ ನೋಡುತ್ತಿದ್ದಾರೆ. ಭದ್ರಾನಾಲೆ ಆಧುನೀಕರಣದಿಂದ 2 ಲಕ್ಷ ಹೆಕ್ಟೇರ್ ಅಚ್ಚುಕಟ್ಟುದಾರರಿಗೆ ಅನುಕೂಲವಾಗಿದೆ.
ದಾವಣಗೆರೆ ವಿವಿ ಆರಂಭಿಸಲಾಗಿದೆ. ಮಹಾನಗರ ಪಾಲಿಕೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ದುಗ್ಗಾವತಿಯಲ್ಲಿ ಮೆಕ್ಕೆಜೋಳ ಸಂಸ್ಕರಣ ಘಟಕ ತೆರೆಯಲಾಗುತ್ತಿದೆ. ಅಂಬೇಡ್ಕರ್, ದೇವರಾಜ ಅರಸು ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದೆಲ್ಲ ಸಾಧನೆಯಲ್ಲವೇ ಎಂದು ಪ್ರಶ್ನಿಸಿದರು.
ನಮ್ಮದು ಬಿಜೆಪಿ ಬಣ. ಮುಖ್ಯಮಂತ್ರಿ ಸದಾನಂದಗೌಡ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲ ಅವರ ಒಟ್ಟಿಗೆ ಇದ್ದೇವೆ. ಯಡಿಯೂರಪ್ಪ ಅವರಿಗೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧ. ಆರೋಪ ಮುಕ್ತರಾದ ತಕ್ಷಣ ಅವರಿಗೆ ರಾಷ್ಟ್ರಮಟ್ಟದಲ್ಲಿ ಸೂಕ್ತಸ್ಥಾನಮಾನ ದೊರೆಯಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.