ADVERTISEMENT

ಉಪ ಚುನಾವಣೆ: ನೀತಿ ಸಂಹಿತೆ ಜಾರಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2017, 6:13 IST
Last Updated 30 ನವೆಂಬರ್ 2017, 6:13 IST

ದಾವಣಗೆರೆ: ಗ್ರಾಮ ಪಂಚಾಯ್ತಿಯಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗವು ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡಿಸೆಂಬರ್ 30 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.

ದಾವಣಗೆರೆ ತಾಲ್ಲೂಕಿನ ಹೆಮ್ಮನ ಬೇತೂರು, ಬಾಡ, ಹೊನ್ನಾಳಿ ತಾಲ್ಲೂಕು ಕತ್ತಿಗೆ, ಎಚ್.ಗೋಪಗೊಂಡನಹಳ್ಳಿ, ಮುಕ್ತೆನಹಳ್ಳಿ, ಲಿಂಗಾಪುರ, ಚನ್ನಗಿರಿ ತಾಲ್ಲೂಕಿನ ಬೆಳ್ಳಿಗನೂಡು, ಸಿದ್ದನಮಠ, ಮುದಿಗೆರೆ ಅಜ್ಜಿಹಳ್ಳಿ, ನಲ್ಲೂರು, ಹರಪನಹಳ್ಳಿ ತಾಲ್ಲೂಕಿನ ನಂದಿಬೇವೂರು ಉಚ್ಚಂಗಿದುರ್ಗ ಹಾಗೂ ಜಗಳೂರು ತಾಲ್ಲೂಕಿನ ಹನುಮಂತಾಪುರ, ಬಿಸ್ತುವಳ್ಳಿ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿನ ಎಲ್ಲಾ ಮದ್ಯದ ಅಂಗಡಿಗಳನ್ನ ಬಂದ್‌ ಮಾಡಬೇಕು.

ಹಲವು ಕಾರಣಗಳಿಗೆ ಚುನಾವಣೆ ನಡೆಯದಿದ್ದಲ್ಲಿ ಅಥವಾ ಅವಿರೋಧ ಆಯ್ಕೆ ಘೋಷಣೆಯಾದ ಪಂಚಾಯ್ತಿ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತುಹೋಗುತ್ತದೆ ಎಂದು ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.