ದಾವಣಗೆರೆ: ಮಹಮ್ಮದ್ ಅಲಿಖಾನ್ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ರಾಜ್ಯಪಾಲರಿಗೆ ಪತ್ರ ಬರೆದು ವಿಧಾನ ಪರಿಷತ್‌ನಲ್ಲಿ ಖಾಲಿ ಆಗಿರುವ ಸದಸ್ಯ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರನ್ನು ನೇಮಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ‘ಪ್ರಜಾವಾಣಿ’ಗೆ ಅಧಿಕೃತ ಮೂಲಗಳು ತಿಳಿಸಿವೆ.
ಆದರೆ, ಲೋಕಸಭಾ ಚುನಾವಣಾ ನೀತಿಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿರುವುದರಿಂದ ನೇಮಕ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಗೊತ್ತಾಗಿದೆ.
ವಿಧಾನ ಪರಿಷತ್‌ಗೆ ಸದಸ್ಯರನ್ನು ನೇಮಕ ಗೊಳಿಸಲು ನೀತಿಸಂಹಿತೆ ಉಲ್ಲಂಘನೆ ಆಗಲಿದೆಯೇ ಎಂದು ಕೇಳಿ ರಾಜ್ಯಪಾಲರು ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಸಮಾಜ ಸೇವಾ ಕ್ಷೇತ್ರದಿಂದ ಮಹಮ್ಮದ್ ಅಲಿಖಾನ್ ಅವರನ್ನು ಬಿಜೆಪಿ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಕಳುಹಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.