ADVERTISEMENT

ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿಗೆ ರೂ. 2 ಕೋಟಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2011, 10:20 IST
Last Updated 24 ಅಕ್ಟೋಬರ್ 2011, 10:20 IST

ಹೊನ್ನಾಳಿ: ತಾಲ್ಲೂಕು ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣವನ್ನು ರೂ.2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈವರೆಗೆ ಶೇ. 60ರಷ್ಟು ಕಾಮಗಾರಿ ಆಗಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಶನಿವಾರ ಇಲ್ಲಿನ ಒಳಾಂಗಣ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ  ಪರಿಶೀಲಿಸಿ ಅವರು ಮಾತನಾಡಿದರು.
ಒಳಾಂಗಣ ಕ್ರೀಡಾಂಗಣ ಒಟ್ಟು 9 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದರಲ್ಲಿ ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಜಿಮ್‌ಗಳು, ಎರಡು ಟೆನಿಸ್ ಕೋರ್ಟ್, ಡ್ರೆಸ್ಸಿಂಗ್ ಕೊಠಡಿ, ಶೌಚಾಲಯ ನಿರ್ಮಿಸಲಾಗುವುದು ಎಂದರು.

ವಿದ್ಯುತ್‌ದೀಪದ ವ್ಯವಸ್ಥೆಗೆ ರೂ.16 ಲಕ್ಷ, ಒಳಾಂಗಣ ಕ್ರೀಡಾಂಗಣಕ್ಕೆ ರೂ.1 ಕೋಟಿ, ಕ್ರೀಡಾಂಗಣದ ವೀಕ್ಷಣಾ ಗ್ಯಾಲರಿ ನಿರ್ಮಾಣಕ್ಕೆ ರೂ.40 ಲಕ್ಷ ವ್ಯಯಿಸಲಾಗುತ್ತಿದೆ. ಕ್ರೀಡಾಂಗಣದ ಸುತ್ತ ಆವರಣ ಗೋಡೆ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ರೂ.40 ಲಕ್ಷ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆ ಹಣ ಶೀಘ್ರ ಬಿಡುಗಡೆಯಾಗಲಿದೆ ಎಂದು ವಿವರಿಸಿದರು.

ಎಇಇ ಗೋಪಾಲ್, ಮಂಜುನಾಥ್, ಹನುಮಂತಪ್ಪ, ತಾಲ್ಲೂಕು ಬಿಜೆಪಿಯ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.