ADVERTISEMENT

ಗರ್ಭಿಣಿಯರಿಗೆ ಎಚ್‌ಐವಿ ಪರೀಕ್ಷೆಗೆ ಸಲಹೆ

ಸಾಸ್ವೆಹಳ್ಳಿ: ಶಿಶು–ತಾಯಿ ಮರಣ ತಡೆ ಅರಿವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2013, 5:54 IST
Last Updated 2 ಡಿಸೆಂಬರ್ 2013, 5:54 IST

ಹೊನ್ನಾಳಿ: ಪ್ರತಿಯೊಬ್ಬ ಗರ್ಭಿಣಿಯರೂ ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್‌ ಕೋಡಿಹಳ್ಳಿ ಹೇಳಿದರು.

ತಾಲ್ಲೂಕಿನ ಸಾಸ್ವೆಹಳ್ಳಿಯ 3ನೇ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಶಿಶು ಮತ್ತು ತಾಯಿ ಮರಣ ತಡೆಗಟ್ಟುವ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗರ್ಭಾವಸ್ಥೆಯಲ್ಲಿ ಎಚ್‌ಐವಿ ಸೋಂಕು ಇರುವುದು ಪತ್ತೆಯಾದರೆ, ತಾಯಿಯಿಂದ ಮಗುವಿಗೆ ಎಚ್‌ಐವಿ ಹರಡುವುದನ್ನು ತಡೆಯಬಹುದು ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶಗಳ ಮಹಿಳೆಯರು ಜಾಗೃತರಾಗಿರುವುದರಿಂದ ಈಚೆಗೆ ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ಕಡಿಮೆಯಾಗಿದೆ. ಕೆಲ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಕಾರ್ಯಕರ್ತೆಯರಾದ ನೇತ್ರಾವತಿ, ಗಾಯತ್ರಮ್ಮ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮಹಿಳೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.