ADVERTISEMENT

ಗ್ರಾಮೀಣಾಭಿವೃದ್ಧಿಗೆ ಒತ್ತು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 10:59 IST
Last Updated 18 ಡಿಸೆಂಬರ್ 2012, 10:59 IST

ಚನ್ನಗಿರಿ: ತಾಲ್ಲೂಕಿನ 24 ಸಾವಿರ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. 38 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುವುದು. ತಾಲ್ಲೂಕಿನ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ತಾಲ್ಲೂಕಿನ ಅಜ್ಜಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಸುವರ್ಣಗ್ರಾಮ ಶಂಕುಸ್ಥಾಪನೆ, ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ ಹಾಗೂ ಕಸಬಾ ಹೋಬಳಿಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುವರ್ಣ ಗ್ರಾಮ ಯೋಜನೆಯಡಿ ಅಜ್ಜಿಹಳ್ಳಿ ಗ್ರಾಮಕ್ಕೆ  ರೂ 55.23 ಲಕ್ಷ ಅನುದಾನ ನೀಡಲಾಗಿದೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ 3.50 ಕೋಟಿ ಮಂಜೂರು ಮಾಡಲಾಗಿದೆ. ಜನಸ್ಪಂದನದಲ್ಲಿ 235 ಮಂದಿಗೆ ಸೌಲಭ್ಯ ನೀಡಿದ್ದೇವೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಆರ್. ಲಲಿತಾ, ಸದಸ್ಯ ತಿಮ್ಮಪ್ಪ, ಸುಭದ್ರಮ್ಮ, ಉಸ್ಮಾನ್ ಷರೀಫ್, ಡಾ.ಮರುಳಪ್ಪ, ಗ್ರಾ.ಪಂ. ಅಧ್ಯಕ್ಷ ಯು.ಎಚ್. ಪ್ರಹ್ಲಾದ್ ಇದ್ದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಜಿ. ಮರುಳಸಿದ್ದಪ್ಪ ಉದ್ಘಾಟಿಸಿದರು. ಬಿ. ಕುಮಾರ್ ಸ್ವಾಗತಿಸಿದರು. ಎಂ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.