ADVERTISEMENT

`ನಗರವು ರಾಜ್ಯದ ಅತ್ಯುತ್ತಮ ಟೆನಿಸ್ ಕೇಂದ್ರವಾಗಲಿ'

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 6:42 IST
Last Updated 8 ಡಿಸೆಂಬರ್ 2012, 6:42 IST

ದಾವಣಗೆರೆ: ನಗರದಲ್ಲಿ ಇನ್ನಷ್ಟು ಐಟಿಎಫ್ ಟೂರ್ನಿಗಳು ನಡೆಯಬೇಕು. ತನ್ಮೂಲಕ ನಗರವು ರಾಜ್ಯದ ಅತ್ಯುತ್ತಮ ಟೆನಿಸ್ ಕೇಂದ್ರವಾಗಿ ಬೆಳೆಯಬೇಕು ಎಂದು ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಹೇಳಿದರು.

ನಗರದಲ್ಲಿ ಅಂತರರಾಷ್ಟ್ರೀಯ ಟೆನಿಸ್ ಫೆಡರೇಷನ್ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ, ಜಿಲ್ಲಾ ಟೆನಿಸ್ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ಜಿಎಂಐಟಿ ಐಟಿಎಫ್ ದಾವಣಗೆರೆ ಓಪನ್ ಪಂದ್ಯದ ಡಬಲ್ಸ್‌ನಲ್ಲಿ ವಿಜೇತರಾದ ಎನ್. ಶ್ರೀರಾಮ್ ಬಾಲಾಜಿ, ಜೀವನ್ ನೆಡುಂಚೆಳಿಯನ್, ರನ್ನರ್ಸ್ ಪ್ರಶಸ್ತಿ ಪಡೆದ ಎನ್. ವಿಜಯಸುಂದರ್ ಪ್ರಶಾಂತ್, ಅರುಣ್ ಪ್ರಕಾಶ್ ರಾಜಗೋಪಾಲನ್ ಜೋಡಿಗೆ ಪ್ರಶಸ್ತಿ ವಿತರಿಸಿ ಶುಕ್ರವಾರ ಅವರು ಮಾತನಾಡಿದರು.

10 ವರ್ಷಗಳ ನಂತರ ದಾವಣಗೆರೆಯಲ್ಲಿ ಅಂತರ ರಾಷ್ಟ್ರೀಯಮಟ್ಟದ ಟೆನಿಸ್ ಪಂದ್ಯಗಳು ನಡೆಯುತ್ತಿವೆ. ಜಿಲ್ಲಾಡಳಿತ ಉತ್ತಮ ಸೌಲಭ್ಯ ನೀಡಿದೆ. ಅತ್ಯುತ್ತಮ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣವಾಗಿದೆ. ಇದನ್ನು ಸಂರಕ್ಷಿಸಬೇಕು ಎಂದು ನುಡಿದರು.

ಅಖಿಲ ಭಾರತ ಟೆನಿಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುಂದರರಾಜು, ಜಿಲ್ಲಾ ಟೆನಿಸ್ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಎಸ್.ಎಂ. ಬ್ಯಾಡಗಿ, ಕಾರ್ಯದರ್ಶಿ ಕೆ.ಪಿ. ಚಂದ್ರಪ್ಪ, ಟೂರ್ನಿಯ ನಿರ್ದೇಶಕ ಸುನಿಲ್ ಯಜಮಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.