ದಾವಣಗೆರೆ: ಲೋಕಸಭೆ ಚುನಾವಣೆ ವೇಳೆ ಅಧಿಕಾರಿಗಳು ಮಾದರಿ ನೀತಿಸಂಹಿತೆಯನ್ನು ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿ ಜಾರಿಗೊಳಿ ಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ್ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಬದ್ಧತೆ, ಜಾಗೃತ ಹಾಗೂ ಎಚ್ಚರಿಕೆಯಿಂದ ಚುನಾವಣೆಯಲ್ಲಿ ಕೆಲಸ ಮಾಡಬೇಕು. ನಿಯಮ, ನಿಬಂಧನೆ ಹಾಗೂ ಕಾನೂನು ಅರಿತು ನಿರ್ವಹಿಸಬೇಕು. ಮತದಾರರಿಗೆ ಯಾವುದೇ ಆಮಿಷಕ್ಕೆ ಒಳಪಡಿಸುವ ಕೆಲಸ ನಡೆಯದಂತೆ ನೋಡಿ ಕೊಳ್ಳಬೇಕು. ಅಂಥ ಸಂಗತಿಗಳು ಕಂಡುಬಂದರೆ ಪತ್ತೆ ಹಚ್ಚಬೇಕು. ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಪರಿಣಾಮಕಾರಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಟಿ.ಆಂಜನೇಯ, ಚುನಾವಣೆಯಲ್ಲಿ ಅಭ್ಯರ್ಥಿಗಳ ವೆಚ್ಚ ಮಿತಿಯನ್ನು ₨ 40 ಲಕ್ಷದಿಂದ ₨ 70 ಲಕ್ಷಕ್ಕೆ ನಿಗದಿಗೊಳಿಸಿದೆ. ಅಭ್ಯರ್ಥಿಗಳ ವೆಚ್ಚಕ್ಕೆ ಸಂಬಂಧಿಸಿದಂತೆ ಲೆಕ್ಕವನ್ನು 30 ದಿನಗಳ ಒಳಗೆ ಸಲ್ಲಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರು ಮಾತನಾಡಿದರು.ಚುನಾವಣಾ ಶಾಖೆ ಶಿರಸ್ತೇದಾರ್ ಕವಿರಾಜ್, ಚುನಾವಣೆ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.