ADVERTISEMENT

ಬಸ್‌ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2013, 5:44 IST
Last Updated 13 ಸೆಪ್ಟೆಂಬರ್ 2013, 5:44 IST

ಚನ್ನಗಿರಿ: ತಾಲ್ಲೂಕಿನ ಬಿಆರ್‌ಟಿ ಕಾಲೊನಿ ಗ್ರಾಮಕ್ಕೆ ಬಸ್‌ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಮಾಡಾಳ್‌ ಗ್ರಾಮದಲ್ಲಿ ರಸ್ತೆ ತಡೆ ಮಾಡುವ ಮೂಲಕ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.

ಬಿಆರ್‌ಟಿ ಕಾಲೊನಿ ಗ್ರಾಮಕ್ಕೆ ಹಲವು ವರ್ಷಗಳಿಂದ ಬಸ್‌ ಸೌಲಭ್ಯ ಇಲ್ಲದೇ ತೊಂದರೆ ಅನುಭವಿಸುತ್ತಿದ್ದೇವೆ. ಈ ವಿಚಾರದಲ್ಲಿ ಸಾರಿಗೆ ಅಧಿಕಾರಿ ಮತ್ತು ಖಾಸಗಿ ಬಸ್‌ ಮಾಲೀಕರಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಈ ಗ್ರಾಮದಿಂದ ಪ್ರತಿದಿನ ನೂರಾರು ಮಕ್ಕಳು ಉನ್ನತ ವಿದ್ಯಾಭ್ಯಾಸಕ್ಕಾಗಿ 2 ಕಿ.ಮೀ ದೂರದ ಮಾಡಾಳ್‌ ಗ್ರಾಮಕ್ಕೆ ನಡೆದುಕೊಂಡು ಬಂದು ಬಸ್‌ಗಳಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಅದಕ್ಕಾಗಿ ಸಾರಿಗೆ ಇಲಾಖೆಯ ಗಮನಸೆಳೆಯಲು ರಸ್ತೆ ತಡೆ ನಡೆಸಿ ಪ್ರತಿಭಟನೆನಡೆಸುತ್ತಿದ್ದೇವೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಹನುಮಂತಪ್ಪ ತಿಳಿಸಿದರು.

ಮೂಡ್ಲಗಿರಿಯಪ್ಪ, ಮಹಾಂತೇಶ್‌, ರಂಗಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸ್ಥಳಕ್ಕೆ ಪಿಎಸ್‌ಐ ಯು. ಸತೀಶ್‌ಕುಮಾರ್‌ ಭೇಟಿ ಬಸ್‌ ಮಾಲೀಕರೊಂದಿಗೆ ಮಾತನಾಡಿ ಬಸ್‌ ಸೌಲಭ್ಯ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಮೇಲೆ ರಸ್ತೆ ತಡೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.