ADVERTISEMENT

ಬಿಜೆಪಿ, ಕಾಂಗ್ರೆಸ್‌ ಆಡಳಿತದಿಂದ ಬೇಸತ್ತ ಮತದಾರ: ಜೆಡಿಎಸ್‌ ಆರೋಪ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 9:10 IST
Last Updated 30 ಮಾರ್ಚ್ 2018, 9:10 IST

ಜಗಳೂರು: ‘ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಜಗಳೂರು ಕ್ಷೇತ್ರದಲ್ಲೂ ಪಕ್ಷಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ’ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ದೇವಿಕೆರೆ ಗುರುಸಿದ್ದಪ್ಪ ಹೇಳಿದರು.‘ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೈಗೊಳ್ಳಲಾಗಿದ್ದ ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸಲಾಗುವುದು. ಕಾಂಗ್ರೆಸ್‌ ಮತ್ತು ಬಿಜೆಪಿ ಆಡಳಿತದಿಂದ ಬೇಸತ್ತಿರುವ ರಾಜ್ಯದ ಜನ ಜೆಡಿಎಸ್‌ ಸರ್ಕಾರಕ್ಕಾಗಿ ಎದುರು ನೋಡುತ್ತಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜೆಡಿಎಸ್‌ ಅಭ್ಯರ್ಥಿ ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ಮಾತನಾಡಿ, ‘10 ವರ್ಷಗಳ ಮೀಸಲು ಅವಧಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಶಾಸಕರ ಆಡಳಿತಾವಧಿಯಲ್ಲಿ ಜಗಳೂರು ಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ. ಸ್ಥಳೀಯನಾದ ನಾನು ಜನಪರ ಪಕ್ಷವಾದ ಜೆಡಿಎಸ್‌ ಮೂಲಕ ರಾಜಕೀಯ ಪಾದಾರ್ಪಣೆ ಮಾಡುತ್ತಿದ್ದೇನೆ. ಜನರು ನನ್ನ ಕೈಹಿಡಿಯುವ ವಿಶ್ವಾಸ ಇದೆ. ಮಾರ್ಚ್ 31ರಂದು ಪಕ್ಷದ ರಾಜ್ಯ ಘಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಜಗಳೂರಿಗೆ ಬರುತ್ತಿದ್ದು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು’ ಎಂದು ಮನವಿ ಮಾಡಿದರು.

ಜೆಡಿಎಸ್‌ ಮುಖಂಡರಾದ ಉಸ್ಮಾನ್‌ ಆಲಿ, ಸುನಂದಮ್ಮ, ಕಾನನಕಟ್ಟೆ ಮಲ್ಲೇಶ್, ಅಜ್ಜಯ್ಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.