ADVERTISEMENT

ಮೊದಲ ದಿನ ಅಭ್ಯರ್ಥಿಗಳ ನಿರಾಸಕ್ತಿ

ಸಲ್ಲಿಕೆಯಾಗದ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 5:35 IST
Last Updated 20 ಮಾರ್ಚ್ 2014, 5:35 IST

ದಾವಣಗೆರೆ: ಲೋಕಸಭಾ ಚುನಾವಣೆಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೊದಲ ದಿನ ಅಭ್ಯರ್ಥಿಗಳು ನಿರಾಸಕ್ತಿ ತೋರಿದರು.

ಯಾವುದೇ ರಾಷ್ಟ್ರೀಯ, ಪ್ರಾದೇಶಿಕ ಅಥವಾ ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತ ಭವನ 8ನೇ ಕೊಠಡಿಯತ್ತ ಸುಳಿಯಲಿಲ್ಲ!

ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಎದುರು ಈಗಾಗಲೇ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಮುಖ್ಯದ್ವಾರದ ಗೇಟ್‌ ಬಂದ್‌ ಮಾಡಲಾಗಿದ್ದು, ಎಡಭಾಗದ ಗೇಟ್‌ ಮಾತ್ರ ತೆರೆಯಲಾಗಿದೆ.

ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ ಮಾರ್ಚ್ 26ರ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸ್ವೀಕಾರ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಎಸ್‌.ಟಿ.ಅಂಜನಕುಮಾರ್‌ ತಿಳಿಸಿದ್ದಾರೆ.

ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸ್ವೀಕಾರ ಮಾಡಲಾಗುವುದು. ಮಾರ್ಚ್‌ 27ರ ಬೆಳಿಗ್ಗೆ 11ರಿಂದ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಮಾರ್ಚ್‌ 29ರ ಮಧ್ಯಾಹ್ನ 3ರ ಒಳಗೆ ನಾಮಪತ್ರ ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.