ಚನ್ನಗಿರಿ: ಯುವ ಕಾಂಗ್ರೆಸ್ ಬಲಪಡಿಸುವ ಉದ್ದೇಶದಿಂದ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದೇ ಪ್ರಥಮ ಬಾರಿಗೆ ಯುವ ಕಾಂಗ್ರೆಸ್‌ಗೆ ಚುನಾವಣೆಯ ಮೂಲಕ ನಾಯಕರನ್ನು ಆಯ್ಕೆ ಮಾಡಲಾಗುವುದು. ಈ ಮೂಲಕ ಯುವಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುವುದು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಮುಖಂಡ ಜಾನ್ಸನ್ ಮ್ಯಾಥ್ಯೂ ಹೇಳಿದರು.
ಪಟ್ಟಣದಲ್ಲಿ ಬುಧವಾರ ನಡೆದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪ್ರತಿ ಬೂತ್‌ಮಟ್ಟದಲ್ಲಿ 30 ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಇದರಲ್ಲಿ ಶೇ. 20ರಷ್ಟು ಪರಿಶಿಷ್ಟ ಜಾತಿ, ವರ್ಗ, ಶೇ. 20ರಷ್ಟು ಯುವತಿಯರಿಗೆ, ಮಹಿಳೆಯರಿಗೆ ಹಾಗೂ ಇನ್ನುಳಿದ ಶೇ. 40ರಷ್ಟು ಸಾಮಾನ್ಯ ವರ್ಗದ ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಈ ರೀತಿ ರಾಹುಲ್ ಗಾಂಧಿಯವರು ಈಗಾಗಲೇ 18 ರಾಜ್ಯಗಳಲ್ಲಿ ನೋಂದಣಿ ಕಾರ್ಯಕ್ರಮವನ್ನು ಮಾಡಿದ್ದಾರೆ ಎಂದರು.
ಮಾಜಿ ಶಾಸಕ ಮಹಿಮ ಪಟೇಲ್ ಮಾತನಾಡಿ, ಸದಸ್ಯತ್ವ ಅಭಿಯಾನ ನಾಯಕರಾಗಲು ಸದಾವಕಾಶವನ್ನು ಕಲ್ಪಿಸುತ್ತದೆ. ಆಂತರಿಕ ಪ್ರಜಾಪ್ರಭುತ್ವ ಬೇರೆ ಯಾವ ಪಕ್ಷದಲ್ಲಿ ಇರುವುದಿಲ್ಲ. ಆಂತರಿಕ ಪ್ರಜಾಪ್ರಭುತ್ವದ ಮೂಲಕ ನಾಯಕರ ಆಯ್ಕೆ ನಡೆಯಲಿದೆ. ಈ ಮೂಲಕ ಯುವಕರು ಯುವ ಕಾಂಗ್ರೆಸ್‌ನ್ನು ಬಲಪಡಿಸುವತ್ತ ಮುಂದೆ ಬರಬೇಕು. ಪಕ್ಷಕ್ಕಾಗಿ ಕೆಲಸ ಮಾಡುವವರನ್ನು ಮಾತ್ರ ಸದಸ್ಯರನ್ನಾಗಿ ಮಾಡಲಾಗುವುದು ಎಂದರು.
ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾನುಲ್ಲಾ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಲೋಕೇಶಪ್ಪ, ಪ್ರವೀಣ್‌ಕುಮಾರ್ ಜೈನ್, ಹರೀಶ್, ಯಾಹ್ಯಖಾನ್, ಮಾಜಿ ತಾ.ಪಂ. ಅಧ್ಯಕ್ಷ ಪಿ. ಲೋಹಿತ್‌ಕುಮಾರ್, ರಾಜಶೇಖರ್, ಪ್ರಕಾಶ್, ಶಂಕರ ಪಾಟೀಲ್, ಅಹಮದ್ ಶರೀಫ್, ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಟಿ.ಎಸ್. ಸತೀಶ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.