ADVERTISEMENT

ಸಾಚಾರ್ ವರದಿ ಜಾರಿಗೆ ಸರ್ಕಾರ ಬದ್ಧ: ರಾಹುಲ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2012, 4:40 IST
Last Updated 4 ಜೂನ್ 2012, 4:40 IST

ದಾವಣಗೆರೆ: ಮುಸ್ಲಿಂ ಸಮಾಜಕ್ಕೆ ಹೆಚ್ಚಿನ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಾಚಾರ್ ವರದಿ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಭರವಸೆ ನೀಡಿದರು.

ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಭಾನುವಾರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅಬ್ದುಲ್ ಎಂಬವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸದ್ಯಕ್ಕೆ ವರದಿ ಜಾರಿಗೆ ಸಂವಿಧಾನದಲ್ಲಿ ಕೆಲ ಅಡೆತಡೆಗಳಿವೆ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಮಹಿಳೆಯರು, ಎಲ್ಲ ಜಾತಿ ಹಾಗೂ ಕೋಮಿನ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸೂಕ್ಷಾತಿಸೂಕ್ಷ್ಮ ಜಾತಿಯವರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಪಕ್ಷದಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮಾತ್ರವೇ ಟಿಕೆಟ್ ನೀಡಲಾಗುತ್ತಿದೆ. ಇದು ಬದಲಾಗಬೇಕು. ಹೊಸಬರಿಗೆ ಅವಕಾಶ ದೊರೆಯುವಂತಾಗಬೇಕು. ಯಾರೂ ಸಹ ಸ್ವಾರ್ಥಕ್ಕಾಗಿ ಕೆಲಸ ಮಾಡಬಾರದು ಎಂದು ಹೇಳಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.