ADVERTISEMENT

‘ಖಾತ್ರಿ ಯೋಜನೆ ಗ್ರಾಮಗಳಿಗೆ ವರದಾನ’

ಸೊರಟೂರು: ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 8:44 IST
Last Updated 12 ಡಿಸೆಂಬರ್ 2013, 8:44 IST

ಹೊನ್ನಾಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಗ್ರಾಮಗಳಿಗೆ ವರದಾನ ಇದ್ದಂತೆ ಎಂದು ನೋಡಲ್‌ ಅಧಿಕಾರಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಜಿ.ಎಸ್‌.ಚನ್ನವೀರಪ್ಪ ಹೇಳಿದರು. ತಾಲ್ಲೂಕು ಸೊರಟೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ಮಂಗಳವಾರ ನಡೆದ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆ ಪಡೆದುಕೊಂಡು ಕಾಮಗಾರಿಗಳನ್ನು ನಿರ್ವಹಿಸಬೇಕು. ಈ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಕೆಲಸ ದೊರೆಯುತ್ತದೆ. ಇದರಿಂದ ಗುಳೇ ಹೋಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಇಂದ್ರಮ್ಮ, ಉಪಾಧ್ಯಕ್ಷ ಕೆ.ರಾಮಪ್ಪ, ಸದಸ್ಯರಾದ ಜಿ.ಬಸವರಾಜಪ್ಪ, ಡಿ.ಹನುಮಂತಪ್ಪ, ಎಚ್‌. ಬಸವರಾಜಪ್ಪ, ರೇವಮ್ಮ, ಶಶಿಕಲಾ, ನೀಲಮ್ಮ, ತಾಲ್ಲೂಕು ಸಂಯೋಜನಾಧಿಕಾರಿ ಮಹೇಂದ್ರಪ್ಪ, ಲೆಕ್ಕ ಪರಿಶೋಧನಾ ತಂಡದ
ಸದಸ್ಯರು, ಸ್ಫೂರ್ತಿ ಸಂಸ್ಥೆಯ ಪ್ರತಿನಿಧಿಗಳು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎನ್‌.ನಾಗರಾಜ್‌ ಇತರರು ಇದ್ದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಯಕ ಬಂಧುಗಳಿಗೆ ಗುರುತಿನ ಚೀಟಿಗಳನ್ನು ಸಭೆಯಲ್ಲಿ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.