ADVERTISEMENT

ದಾವಣಗೆರೆ: 124 ಮಂದಿಗೆ ಕೊರೊನಾ, ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 16:37 IST
Last Updated 26 ಅಕ್ಟೋಬರ್ 2020, 16:37 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ 124 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. 81 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಬಾಡಾದ 60 ವರ್ಷದ ವೃದ್ಧೆ ತೀವ್ರ ಉಸಿರಾಟದ ತೊಂದರೆ ಮತ್ತು ಮಧುಮೇಹದಿಂದ ನಿಧನರಾದರು.

ದಾವಣಗೆರೆ ತಾಲ್ಲೂಕಿನಲ್ಲಿ 52 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಹರಿಹರ ತಾಲ್ಲೂಕಿನ 31, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ 19, ಚನ್ನಗಿರಿ ತಾಲ್ಲೂಕಿನ 14, ಜಗಳೂರು ತಾಲ್ಲೂಕಿನ ಏಳು ಮಂದಿಗೆ ಕೊರೊನಾ ಕಂಡು ಬಂದಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಯ ಒಬ್ಬರಿಗೆ ವೈರಸ್‌ ತಗುಲಿದೆ.

ADVERTISEMENT

ಜಿಲ್ಲೆಯಲ್ಲಿ ಈವರೆಗೆ 20,482 ಮಂದಿಗೆ ಕೊರೊನಾ ಬಂದಿದೆ. 19,385 ಮಂದಿ ಗುಣಮುಖರಾಗಿದ್ದಾರೆ. 254 ಮಂದಿ ಮೃತಪಟ್ಟಿದ್ದಾರೆ. 843 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.